ಸುಳ್ಯ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವರ ಕಾಲಾವಧಿ ಜಾತ್ರೋತ್ಸವ ನಡೆಯುತ್ತಿದ್ದು, ಇಂದು ಬೆಳಿಗ್ಗೆ ಹಸಿರುವಾಣಿ ಮೆರವಣಿಗೆ ನಡೆಯಿತು.
ಬಳಿಕ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ದೇಲಂಪಾಡಿ ಗಣೇಶ್ ತಂತ್ರಗಳ ಮಾರ್ಗದರ್ಶನದಲ್ಲಿ ಶುದ್ಧಿ ಕಲಶ, ತುಲಾಭಾರ ಸೇವೆ, ಪಲ್ಲಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ಸುಳ್ಯ ಪರಮ್ ಸ್ಟುಡಿಯೋ ಮಾಲಕ, ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪರಮೇಶ್ವರ ಬಿ.ಕೆ.ಯವರು ಶ್ರೀ ಮಹಾವಿಷ್ಣು ದೇವರ ಪೋಟೋವನ್ನು ದೇವಸ್ಥಾನಕ್ಕೆ ಹಸ್ತಾಂತರಿಸಿದರು. ತಹಶಿಲ್ದಾರ್ ಮಂಜುಳ ಆಗಮಿಸಿ ಪ್ರಸಾದ ಸ್ವೀಕರಿಸಿದರು, ಆಡಳಿತಾಧಿಕಾರಿ ಚಂದ್ರಕಾಂತ್ ಎಂ.ಆರ್., ಸಮಿತಿಯ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.