ಶಾಂತಿನಗರ ಸ ಉ ಹಿ ಪ್ರಾ ಶಾಲೆಯಲ್ಲಿ 76 ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣ ವನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರು ನಜೀರ್ ಶಾಂತಿನಗರ ನೆರವೇರಿಸಿದರು.ಈ ಸಂದರ್ಭದಲ್ಲಿ ಸಮಿತಿಯ ಉಪಾಧ್ಯಕ್ಷರು ಹಾಗೂ ಎಲ್ಲಾ ಸದಸ್ಯರು ಶಾಲಾ ಆಧ್ಯಾಪಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸಂವಿದಾನಕ್ಕೆ ಸಂಬಂಧಿಸಿದ ಭಾಷಣ ಹಾಡು ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಶಾಲಾ ಮುಖ್ಯ ಶಿಕ್ಷಕರಾದ ಪ್ರತಿಮಾ ಸ್ವಾಗತಿಸಿ ದೈಹಿಕ ಶಿಕ್ಷಕ ರಘುನಾಥ್ ವಂದಿಸಿದರು