12ರಲ್ಲಿ 11 ಸ್ಥಾನಗಳನ್ನು ಗೆದ್ದ ಬಿಜೆಪಿಯಿಂದ ವಿಜಯೋತ್ಸವ
ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿರುವ ಸರಕಾರಕ್ಕೆ ಗ್ಯಾರಂಟಿ ಇಲ್ಲ – ವೆಂಕಟ್ ವಳಲಂಬೆ
ಯೇನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ ಜ. 27 ರಂದು ನಡೆದಿದ್ದು, 12 ಸ್ಥಾನಗಳಲ್ಲಿ 11 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ ಬಿಜೆಪಿ ಬೆಂಬಲಿಗರು ವಿಜಯೋತ್ಸವ ಆಚರಿಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಮಂಡಲಾಧ್ಯಕ್ಷ ವೆಂಕಟ್ ವಳಲಂಬೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವ ಸರಕಾರಕ್ಕೆ ಗ್ಯಾರಂಟಿ ಇಲ್ಲ. ಸಹಕಾರಿ ಕ್ಷೇತ್ರದ ಚುನಾವಣೆಯಲ್ಲಿ ಹೆಚ್ಚಿನ ಸಹಕಾರಿ ಸಂಘಗಳಲ್ಲಿ ಸದಸ್ಯರು ಬಿಜೆಪಿಯನ್ನು ಬೆಂಬಲಿಸಿರುವುದೇ ಕಾಂಗ್ರೆಸ್ ನ ವೈಫಲ್ಯಕ್ಕೆ ಸಾಕ್ಷಿ ಎಂದರು. ಶಾಸಕಿ ಕು. ಭಾಗೀರಥಿ ಮುರುಳ್ಯ ವಿಜೇತರಿಗೆ ಶುಭ ಹಾರೈಸಿದರು.
ವಿಜೇತ ಅಭ್ಯರ್ಥಿಗಳಾದ ಹಾಲಿ ಅಧ್ಯಕ್ಷ ಭವಾನಿಶಂಕರ ಪೂಂಬಾಡಿ, ಹಾಲಿ ಉಪಾಧ್ಯಕ್ಷ ಭರತ್ ನೆಕ್ರಾಜೆ, ನೂತನ ನಿರ್ದೇಶಕ ಶಿವಪ್ರಸಾದ್ ಮಾದನಮನೆ ಬೆಂಬಲಿಗರಿಗೆ ಮತ್ತು ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. ಬಿಜೆಪಿ ನಾಯಕ ಶಿವಪ್ರಸಾದ್ ನಡುತೋಟ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಿಜೆಪಿ ಬೆಂಬಲಿತ ಕಾರ್ಯಕರ್ತರು ವಿಜಯೋತ್ಸವದಲ್ಲಿ ಪಾಲ್ಗೊಂಡರು