Home Uncategorized ನಿಂತಿಲ್ಲು: ಕೆ.ಎಸ್ ಗೌಡ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ನಿಂತಿಲ್ಲು: ಕೆ.ಎಸ್ ಗೌಡ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

0

ನಿಂತಿಕಲ್ಲಿನ ಕೆ.ಎಸ್ ಗೌಡ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಜ. 27ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಪೂರ್ವಾಹ್ನ ಉಪನ್ಯಾಸಕರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ನಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹಲವಾರು ಮನೋರಂಜನಾ ಕಾರ್ಯಕ್ರಮಗಳು ನಡೆಯಿತು.
ಅಪರಾಹ್ನ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕುಮಾರಸ್ವಾಮಿ ಕೆ.ಎಸ್, ಜೀವನದಲ್ಲಿ ಮೌಲ್ಯಗಳನ್ನು ಮೈಗೂಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿ ಕೊಂಡು ಅತ್ತ್ಯುತ್ತಮ ಜೀವನ ನಡೆಸಲು ಮಾರ್ಗದರ್ಶನ ನೀಡಿದರು.


ಅತಿಥಿಗಳಾಗಿ ಭಾಗವಹಿಸಿದ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಯಮುನಾ ಕಾರ್ಜ ಮತ್ತು
ಅಧ್ಯಕ್ಷತೆ ವಹಿಸಿದ್ದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸುದರ್ಶನ ಪಟ್ಟಾಜೆ ಶುಭಾಶಯ ಕೋರಿದರು. ಪ್ರಾಚಾರ್ಯರಾದ ಸದಾನಂದ ರೈ ಕೂವೆಂಜ ಸಂದರ್ಭೋಚಿತವಾಗಿ ಮಾತನಾಡಿದರು. ಉಪನ್ಯಾಸಕರಾದ ಜೀವನ್ ಎಸ್.ಎಚ್, ಜ್ಯೋತ್ಸ್ನಾ ಎಂ.ಜೆ, ಸೌಮ್ಯ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

NO COMMENTS

error: Content is protected !!
Breaking