ತಾಲೂಕಿನ ಆಸ್ಪತ್ರೆಗಳಲ್ಲಿ ಯಶಸ್ವಿನಿ ಯೋಜನೆ ದೊರಕುವಂತಾಗಬೇಕು : ಮನವಿ
ಮಡಪ್ಪಾಡಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಿನಯ ಕುಮಾರ್ ಮುಳುಗಾಡು, ಉಪಾಧ್ಯಕ್ಷ ಸಚಿನ್ ಬಳ್ಳಡ್ಕ ಹಾಗೂ ನಿರ್ದೇಶಕರು ಜ.29ರಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ರನ್ನು ಭೇಟಿ ಮಾಡಿದರು.
ಈ ಸಂದರ್ಭ ಮಡಪ್ಪಾಡಿ ಸಹಕಾರ ಸಂಘದ ವತಿಂದ ವಿನಯ್ ಕುಮಾರ್ ರವರು ಡಾ.ರಾಜೇಂದ್ರ ಕುಮಾರ್ ರಿಗೆ ಹೂ ಗುಚ್ಚ ನೀಡಿ ಗೌರವಿಸಿದರೆ, ರಾಜೇಂದ್ರ ಕುನಾರ್ ರವರು ಶಾಲು, ಹಾರ ಹಾಕಿ ವಿನಯ ಕುಮಾರ್ ರನ್ನು ಗೌರವಿಸಿದರು.
ಮನವಿ ಸಲ್ಲಿದೆ : ಸರಕಾದ “ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಯೋಜನೆ”ಯನ್ನು ಸಂಘದ ಮೂಲಕ ಸದಸ್ಯರಿಗೆ ಜಾರಿಗೊಳಿಸಲಾಗಿದ್ದು, ಸುಳ್ಯ ಮತ್ತು ಪುತ್ತೂರು ತಾಲೂಕು ಮಟ್ಟದಲ್ಲಿ ಯಾವುದೇ ಯಶಸ್ವಿನಿ ನೋಂದಾಯಿತ ಆಸ್ಪತ್ರೆಗಳು ಇಲ್ಲದೇ ಇರುವುದರಿಂದ ಫಲಾನುಭವಿಗಳಿಗೆ ಈ ಯೋಜನೆಯ ಪ್ರಯೋಜನ ಪಡೆಯಲು ಸದಸ್ಯರು ವಂಚಿತರಾಗುತ್ತಿದ್ದಾರೆ. ಆದುದರಿಂದ ಸುಳ್ಯ ತಾಲೂಕಿನಲ್ಲಿ ಕೆ.ವಿ.ಜಿ ವೈದ್ಯಕೀಯ ಆಸ್ಪತ್ರೆ ಮತ್ತು ಪುತ್ತೂರು ತಾಲೂಕಿನ ಆಸ್ಪತ್ರೆಗಳಲ್ಲಿ ಹಾಗೂ ಜಿಲ್ಲಾ ಕೇಂದ್ರ ನಗರವಾಗಿರುವ ಮಂಗಳೂರಿನ ಪ್ರಮುಖ ಹಾಗೂ ಅತ್ಯಾಧುನಿಕ ಸೌಲಭ್ಯ ಹೊಂದಿರುವ ಆಸ್ಪತ್ರೆಗಳನ್ನು “ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಯೋಜನೆ”ಯಡಿ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಿ ಸಂಘದ ರೈತ ಸದಸ್ಯರಿಗೆ ಅನುಕೂಲ ಮಾಡಿಕೊಡಬೇಕಾಗಿ ಮಡಪ್ಪಾಡಿ ಸಹಕಾರ ಸಂಘದ ಅಧ್ಯಕ್ಷ ವಿನಯ ಮುಳುಗಾಡು ರವರು ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಿಗೆ ಮನವಿ ಸಲ್ಲಿಸಿರುವದಾಗಿ ತಿಳಿದುಬಂದಿದೆ.