ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಪೋಷಕರ ಸಭೆ ನಡೆಯಿತು. ದಕ್ಷಿಣ ಕನ್ನಡ ವಿದ್ಯಾ ಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯರವರು ಅಧ್ಯಕ್ಷತೆಯನ್ನು ವಹಿಸಿ ಪೋಷಕರಿಗೆ ಮಾಹಿತಿಯನ್ನು ನೀಡಿದರು. ಪೋಷಕರ ಪರವಾಗಿ ದಿವೀಶ್ ಕುಮಾರ್ ರವರು ಮಾತನಾಡಿ ಸಲಹೆ ಸೂಚನೆಗಳನ್ನು ನೀಡಿದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಗದಾಧರ ಬಾಳಗೂಡು ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭನುಡಿಗಳನ್ನು ಆಡಿದರು.

ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ ಕೆ ರವರು ಪ್ರಾಸ್ತಾವಿಕ ಮಾತುಗಳನ್ನಾಡಿ ಎಲ್ಲರನ್ನು ಸ್ವಾಗತಿಸಿದರು. ಉಪನ್ಯಾಸಕ ದಯಾನಂದ ಓ.ಡಿ ವಂದಿಸಿದರು. ಉಪನ್ಯಾಸಕಿ ಶ್ರೀಮತಿ ಸ್ವರ್ಣ ಕಲಾ ರವರು ಕಾರ್ಯಕ್ರಮ ನಿರೂಪಿಸಿದರು.