ಸುಳ್ಯ
ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿನ ನೂತನ ಸಭಾಭವನ ನಿರ್ಮಾಣಕ್ಕೆ ಅನುದಾನಕ್ಕಾಗಿ ಸುಳ್ಯದ ಶಾಸಕರಾದ ಕುಮಾರಿ ಭಾಗೀರಥಿ ಮುರುಳ್ಯರವರಿಗೆ ಫೆ.3ರಂದು ಶಾಸಕರ ಕಛೇರಿಯಲ್ಲಿ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಎಂ.ಬಿ. ಸದಾಶಿವ, ಕಾರ್ಯಾಧ್ಯಕ್ಷರಾದ ಲಿಂಗಪ್ಪ ಗೌಡ ಕೇರ್ಪಳ, ಸದಸ್ಯರಾದ ಶೇಷಗಿರಿ ನಾಯಕ್ ಕೊಡಿಯಾಲಬೈಲ್, ಕಾಲೇಜಿನ ಪ್ರಾಂಶುಪಾಲರಾದ ಮೋಹನ ಗೌಡ ಬಿ ಕೆ, ಉಪಪ್ರಾಂಶುಪಾಲರಾದ ಪ್ರಕಾಶ್ ಮೂಡಿತ್ತಾಯ , ಹಿರಿಯ ಉಪನ್ಯಾಸಕಿಯಾದ ಶ್ರೀಮತಿ ಹಸೀನಾಬಾನು ಉಪಸ್ಥಿತರಿದ್ದರು.
ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರು ಧನ ಸಹಾಯ ನೀಡುವುದಾಗಿ ಭರವಸೆಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.