ಅರಂತೋಡು: ಬೈಕ್ ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ಪೊಲೀಸ್ ಕಾನ್ ಸ್ಟೇಬಲ್ ಆಸ್ಪತ್ರೆಯಲ್ಲಿ ಮೃತ್ಯು

0

ಅರಂತೋಡಿನಲ್ಲಿ ಫೆ.5ರಂದು ಬೆಳಿಗ್ಗೆ ಬೈಕ್ ಸ್ಕಿಡ್ ಆಗಿ ತಲೆಗೆ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೈಸೂರಿನ ಪೊಲೀಸ್ ಕಾನ್ ಸ್ಟೇಬಲ್ ಹರೀಶ್ ಅವರು ಚಿಕಿತ್ಸೆ ಫಲಕಾರಿಯಾಗದೆ ಫೆ.9ರಂದು ಸಂಜೆ ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ.

ಹರೀಶ್ ಅವರು ಮೈಸೂರಿನವರಾಗಿದ್ದು, ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಫೆ.5ರಂದು ಬೆಳಿಗ್ಗೆ ಅವರು ಮೈಸೂರಿನಿಂದ ಮಂಗಳೂರಿಗೆ ತಮ್ಮ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಅರಂತೋಡಿನಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದರು.