ಸುಳ್ಯದ ಬಾಳೆಮಕ್ಕಿಯಲ್ಲಿ ಪಾದಾಚಾರಿಗೆ ಬುಲೆಟ್ ಬೈಕ್ ಡಿಕ್ಕಿ

0

ಗಂಭೀರ ಗಾಯ, ಆಸ್ಪತ್ರೆಗೆ ರವಾನೆ

ಪಾದಚಾರಿಗೆ ಬುಲೆಟ್ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಸುಳ್ಯದ ಬಾಳೆಮಕ್ಕಿಯ ದ್ವಾರಕಾ ಹೋಟೆಲ್ ಬಳಿ ಸಂಭವಿಸಿದೆ.

ಗಾಂಧಿನಗರ ಕಡೆಯಿಂದ ಬರುತ್ತಿದ್ದ ಬುಲೆಟ್ ಬೈಕ್ ದ್ವಾರಕ ಹೊಟೇಲ್ ಬಳಿ ಪಾದಾಚಾರಿಗೆ ಡಿಕ್ಕಿ ಹೊಡೆಯಿತು. ಪರಿಣಾಮ ಸವಾರನಗೆ ಗಾಯಗಳಾಗಿವೆ.

ಗಾಯಳುವನ್ನು ಸ್ಥಳೀಯರು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು, ಗಂಭೀರ ಸ್ಥಿತಿಯಲ್ಲಿ ಇದ್ದಾರೆ ಎಂದು ತಿಳಿದು ಬಂದಿದೆ.