ಜಯನಗರ ಶಾಲೆಯಲ್ಲಿ ಹಲ್ಲಿನ ಸುರಕ್ಷತೆ ಬಗ್ಗೆ ಮಾಹಿತಿ ಕಾರ್ಯಾಗಾರ

0

ಮಕ್ಕಳಿಗೆ ಟೂತ್ ಪೇಸ್ಟ್, ಟೂತ್‌ಬ್ರಷ್ ವಿತರಣಾ ಕಾರ್ಯಕ್ರಮ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ಇದರ ಆಶ್ರಯದಲ್ಲಿ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ, ಸೂಂತೋಡು ದಂತ ಚಿಕಿತ್ಸಾಲಯ ಸುಳ್ಯ ಇದರ ಸಹಯೋಗದಲ್ಲಿ ಹಲ್ಲಿನ ಸುರಕ್ಷತೆ ಬಗ್ಗೆ ಮಾಹಿತಿ ಕಾರ್ಯಾಗಾರ ಮತ್ತು ಮಕ್ಕಳಿಗೆ ಟೂತ್ ಪೇಸ್ಟ್ ಮತ್ತು ಟೂತ್ ಬ್ರಷ್ ವಿತರಣಾ ಕಾರ್ಯಕ್ರಮವು ಫೆ.12 ರಂದು ಜಯನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.


ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು.
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಕೊಯಿಂಗೋಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


ಸೂಂತೋಡು ದಂತ ಚಿಕಿತ್ಸಾಲಯದ ಡಾ.ರೇವಂತ್ ಸೂಂತೋಡು ಸಂಪನ್ಮೂಲ ವ್ಯಕ್ತಿಯಾಗಿ ಹಲ್ಲಿನ ಸುರಕ್ಷತೆ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಮುದ್ದಪ್ಪ ಜಯನಗರ, ಶಾಲಾ ಮುಖ್ಯೋಪಾಧ್ಯಾಯಿನಿ ಕೆ.ವೀಣಾ, ಸಜ್ಜನ ಪ್ರತಿಷ್ಠಾನದ ನಿರ್ದೇಶಕ ಲತೀಫ್ ಹರ್ಲಡ್ಕ, ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಯಶ್ವಿತ್ ಕಾಳಮ್ಮನೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ವರದಿಗಾರ ಶರೀಫ್ ಜಟ್ಟಿಪಳ್ಳ ಸ್ವಾಗತಿಸಿ, ವಿದ್ಯಾರ್ಥಿನಿ ಯಶ್ವಿನಿ ಪ್ರಾರ್ಥಿಸಿ ಹಸೈನಾರ್ ಜಯನಗರ ಕಾರ್ಯಕ್ರಮ ನಿರೂಪಿಸಿ, ಜರ್ನಲಿಸ್ಟ್ ಯೂನಿಯನ್ ಕಾರ್ಯದರ್ಶಿ ಗಣೇಶ್ ಕುಕ್ಕುದಡಿ ವಂದಿಸಿದರು.


ಬಳಿಕ ವಿದ್ಯಾರ್ಥಿಗಳಿಗೆ ಟೂತ್ ಪೇಸ್ಟ್ ಮತ್ತು ಟೂತ್ ಬ್ರಷ್ ವಿತರಣೆ ಮಾಡಲಾಯಿತು.


ಕಾರ್ಯಕ್ರಮದಲ್ಲಿ ಶಿಕ್ಷಕಿಯರಾದ ಶ್ರೀಮತಿ ನಳಿನಾಕ್ಷಿ, ಶ್ರೀಮತಿ ಭಾರತಿ, ಶ್ರೀಮತಿ ಅಶ್ವಿನಿ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷೆ ಪ್ರಜ್ಞಾ ಎಸ್.ನಾರಾಯಣ್ ಅಚ್ರಪ್ಪಾಡಿ, ಜರ್ನಲಿಸ್ಟ್ ಯೂನಿಯನ್ ಸದಸ್ಯರಾದ
ಶ್ರೀಧರ್ ಕಜೆಗದ್ದೆ, ಅನಿಲ್ ಕಳಂಜ ಹಾಗೂ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.