
ಎಡಮಂಗಲ ಶ್ರೀ ಪಂಚಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ನಡೆಯುತ್ತಿದ್ದು, ಇಂದು ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ದೇವರ ದರ್ಶನ ಬಲಿ ವೈಭವದಿಂದ ನಡೆದು ಬಟ್ಟಲು ಕಾಣಿಕೆ, ಮಹಾಪೂಜೆ, ಪ್ರಸಾದ ವಿತರಣೆ, ನಡೆಯಿತು.

ಬಳಿಕ ಮಹಾ ಅನ್ನಸಂತರ್ಪಣೆ ನಡೆಯಿತು. ರಾತ್ರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಸಂತ ಕಟ್ಟೆ ಪೂಜೆ, ರಾತ್ರಿ 8 ಗಂಟೆಗೆ ಸಭಾ ಕಾರ್ಯಕ್ರಮದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ವಿಭಾಗದ ಪ್ರಮುಖ ಕೇಶವ ಬಂಗೇರ ಧಾರ್ಮಿಕ ಉಪನ್ಯಾಸ ನೀಡಲಿರುವರು. ಬಳಿಕ ದೈವರಾಜೆ ಶ್ರೀ ಬಬ್ಬು ಸ್ವಾಮಿ ಎಂಬ ವಿಭಿನ್ನ ಶೈಲಿಯಲ್ಲಿ ತುಳು ನಾಟಕ ನಡೆಯಲಿರುವುದು.

