ಎಣ್ಮೂರು : ವಿಷ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಮೃತ್ಯು

0

ಎಣ್ಮೂರಿನಲ್ಲಿ ವಿಷ ಸೇವಿಸಿ ಆಸ್ವಸ್ಥಗೊಂಡು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಫೆ.15 ರಂದು ಮೃತಪಟ್ಟ ಘಟನೆ ನಡೆದಿದೆ.


ಎಣ್ಮೂರು ಗ್ರಾಮದ ಕಲ್ಲೇರಿ ಸುಂದರ ಎಂಬವರು ಫೆ.12 ರಂದು ಮನೆಯಲ್ಲಿ ವಿಷ ಸೇವಿಸಿದ್ದು ಕೂಡಲೆ ಅವರನ್ನು ಸುಳ್ಯದ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆಗೆ ದಾಖಲಿಸಲಾಯಿತು.
ಬಳಿಕ ಅವರನ್ನು ಅಲ್ಲಿಂದ ಮನೆಗೆ ಕರೆದುಕೊಂಡು ಹೋಗಲಾಯಿತು.
ಫೆ.15 ರಂದು ಪುನ: ಅಸೌಖ್ಯಕ್ಕೊಳಗಾದಾಗ ಅವರನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು
ಬರುವಾಗ ಅವರು ದಾರಿಮಧ್ಯೆ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿರುವುದಾಗಿ ತಿಳಿದು ಬಂದಿದೆ.


ಇವರಿಗೆ 62 ವರ್ಷ ಪ್ರಾಯವಾಗಿದ್ದು ಮಗಳು ನೀಡಿದ ದೂರಿನಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.