ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನ ಎನ್ ಸಿ ಸಿ ಕೆಡೆಟ್ ವಿದ್ಯಾರ್ಥಿಗಳು ಇತ್ತೀಚೆಗೆ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪೆರೇಡ್‍ನಲ್ಲಿ ಭಾಗವಹಿಸಿದ್ದರು.

ಪೇರೆಡ್ ನಲ್ಲಿ ಭಾಗವಹಿಸಿ ತಾಯ್ನಾಡಿಗೆ ಮರಳಿದ ಚೇತನ್ ಕೆ., ಕೃಷ್ಣ ಕೆ. ಎಲ್., ಚಲನಾ ಟಿ. ಹಾಗೂ ವಿಶೇಷ ಅತಿಥಿಯಾಗಿ ಭಾಗವಹಿಸಿದ್ದ ಎನ್. ಎನ್. ಎಸ್. ನಾಯಕ ಹರ್ಷಿತ್ ಕೆ. ಎಲ್. ಅವರನ್ನು ನೆಹರೂ ಮೆಮೋರಿಯಲ್ ಕಾಲೇಜು ಸಮ್ಮುಖದಲ್ಲಿ ಸಾರ್ವಜನಿಕವಾಗಿ ಸುಳ್ಯ ಜ್ಯೋತಿ ಸರ್ಕಲ್ ಬಳಿ ಅಭಿನಂದಿಸಿ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಕಾಲೇಜಿಗೆ ಕರೆದೊಯ್ಯಲಾಯಿತು.

ಅಕಾಡೆಮಿ ಅಫ್ ಲಿಬರಲ್ ಎಜುಕೇಶನ್ ನ ಅಧ್ಯಕ್ಷರಾದ ಡಾ.ಕೆ.ವಿ.ಚಿದಾನಂದರವರು ವಿದ್ಯಾರ್ಥಿಗಳನ್ನು ಗೌರವಿಸಿ, ಸ್ವಾಗತ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
