ಪುತ್ತೂರು ಉಪವಿಭಾಗದ ಸಹಕಾರಿ ಬಂಧುಗಳ ವತಿಯಿಂದ ಕಾರ್ಯಕ್ರಮ ಆಯೋಜನೆ
ಸುಳ್ಯ ಸಿ.ಎ.ಬ್ಯಾಂಕ್ ಸಭಾಂಗಣದಲ್ಲಿ ಆಮಂತ್ರಣ ಪತ್ರ ಬಿಡುಗಡೆ
ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಎಸ್ ಸಿ ಆರ್ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ರವರಿಗೆ ಮತ್ತು ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಗೆ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು ರವರಿಗೆ ಪುತ್ತೂರು ಉಪವಿಭಾಗದ ಸಹಕಾರಿ ಬಂಧುಗಳ ವತಿಯಿಂದ ಅಭಿವಂದನಾ ಕಾರ್ಯಕ್ರಮ ಮಾ.1 ರಂದು ಪುತ್ತೂರಿನ ಎಂ.ಸುಂದರ ರಾಮ್ ಶೆಟ್ಟಿ ಸ್ಮಾರಕ ಬಂಟರ ಭವನ ಇಲ್ಲಿ ನಡೆಯಲಿದ್ದು, ಕಾರ್ಯಕ್ರಮ ಆಮಂತ್ರಣ ಬಿಡುಗಡೆ ಮತ್ತು ಪೂರ್ವಭಾವಿ ಸಭೆ ಇಂದು ಸುಳ್ಯ ಸಿ.ಎ.ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.
ಅಭಿವಂದನಾ ಸಮಿತಿ ಅಧ್ಯಕ್ಷರು, ಕೆ.ಎಂ.ಎಫ್ ನ ಉಪಾಧ್ಯಕ್ಷರಾದ ಎಸ್.ಬಿ.ಜಯರಾಮ ರೈ ಮತ್ತು ಸಮಿತಿ ಸಂಚಾಲಕರು ಮತ್ತು ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಸ್.ಎನ್.ಮನ್ಮಥರು ಆಮಂತ್ರಣ ಪತ್ರ ಬಿಡುಗಡೆ ಮಾಡಿದರು. ವೇದಿಕೆಯಲ್ಲಿ ಕಾರ್ಯಕ್ರಮದ ಸುಳ್ಯ ತಾಲೂಕು ಸಮಿತಿಯ ಸಂಚಾಲಕರಾದ ಸಂತೋಷ್ ಕುತ್ತಮೊಟ್ಟೆ,ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾದ ವಿಷ್ಣು ಭಟ್ ಮೂಲೆತೋಟ, ಸುಳ್ಯ ಡಿಸಿಸಿ ಬ್ಯಾಂಕ್ ಶಾಖಾ ವ್ಯವಸ್ಥಾಪಕರಾದ ಚಂದ್ರಪ್ರಕಾಶ್ ಕಂಬಳ, ಸುಳ್ಯ ಸಿ.ಎ.ಬ್ಯಾಂಕ್ ಅಧ್ಯಕ್ಷ ಎ.ವಿ.ವಿಕ್ರಮ್, ಮುರುಳ್ಯ -ಎಣ್ಮೂರು ಸಹಕಾರಿ ಸಂಘದ ಅಧ್ಯಕ್ಷ ವಸಂತ ನಡುಬೈಲು , ಪಂಜ ಸಹಕಾರಿ ಸಂಘದ ಸಿಇಒ ನೇಮಿರಾಜ ಪಲ್ಲೋಡಿ ಉಪಸ್ಥಿತರಿದ್ದರು.
ಎಸ್.ಬಿ.ಜಯರಾಮ ರೈ ಕಾರ್ಯಕ್ರಮದ ವಿವರ ನೀಡಿ ಪುತ್ತೂರು ಉಪವಿಭಾಗದ ಸಹಕಾರಿ ಬಂಧುಗಳ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸುಮಾರು 2ಸಾವಿರ ಮಂದಿ ಸೇರುವ ನಿರೀಕ್ಷೆ ಇದೆ ಎಂದು ಹೇಳಿದರು.
ಸುಳ್ಯ ಸಿ.ಎ.ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ ಎಸ್.ಪಿ.ಸ್ವಾಗತಿಸಿದರು.
ಸಹಕಾರಿ ಸಂಘಗಳ ಸಿಇಒ ಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮಾ.1ರ ಅಭಿವಂದನಾ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ನೆರವೇರಿಸಲಿದ್ದಾರೆ. ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಶ್ಯಾಮ್ ಭಟ್ ಅಭಿವಂದಿಸಲಿದ್ದಾರೆ. ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಅಭಿವಂದನಾ ಭಾಷಣ ಮಾಡಲಿದ್ದಾರೆ. ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ ಶುಭಾಶಂಸನೆ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಹಿಸಲಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ, ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ಮಾಸ್ ಅಧ್ಯಕ್ಷ ಸೀತಾರಾಮ ರೈ ಸವಣೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.