ಜಾಲ್ಸೂರು ಗ್ರಾಮದ ಅಡ್ಕಾರಿನ ಅಂಜನಾದ್ರಿ ಶ್ರೀ ಪ್ರಸನ್ನಾಂಜನೇಯ ಸ್ವಾಮಿ ಹಾಗೂ ಗುಳಿಗರಾಜ ಕ್ಷೇತ್ರದಲ್ಲಿ ಕಾಲಾವಧಿ ಜಾತ್ರಾ ಮಹೋತ್ಸವವು ಫೆ.26ರಿಂದ 28ರವರೆಗೆ ಜರುಗಲಿದ್ದು, ಜಾತ್ರಾ ಮಹೋತ್ಸವಕ್ಕೆ ಫೆ.19ರಂದು ಬೆಳಿಗ್ಗೆ ಮುಹೂರ್ತದ ಗೊನೆ ಕಡಿಯಲಾಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ಬ್ರಹ್ಮಶ್ರೀ ವೇ. ಮೂ. ಪುರೋಹಿತ ನಾಗರಾಜ ಭಟ್, ಆಡಳಿತ ಸಮಿತಿ ಅಧ್ಯಕ್ಷ ಶಿವರಾಮ ರೈ ಕುರಿಯ, ಸೇವಾ ಸಮಿತಿ ಅಧ್ಯಕ್ಷ ವಿವೇಕ್ ರೈ ಡಿಂಬ್ರಿಗುತ್ತು, ಸಮಿತಿಯ ಸದಸ್ಯರಾದ ರವಿಪ್ರಸಾದ್ ಕಜೆಗದ್ದೆ, ನಾಗೇಶ್ ಅಡ್ಕಾರು, ಜಯಂತ ಗೌಡ ಅಡ್ಕಾರು ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.