ನಾಳೆಯಿಂದ ಶ್ರೀ ಹರಿಹರೇಶ್ವರ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ

0

ಶ್ರೀ ಹರಿಹರೇಶ್ವರ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ
ಫೆ.20ರಿಂದ22ರವರೆಗೆ ನಡೆಯಲಿರುವುದು.

ಫೆ.20ರಂದು ಬೆಳಿಗ್ಗೆ  ಹಸಿರು ಕಾಣಿಕೆ ಪ್ರಾರಂಭ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ.  ಸಾಯಂಕಾಲ ತಂತ್ರಿಗಳ ಆಗಮನ ವಾಗಲಿದ್ದು ರಾತ್ರಿ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಫೆ. 21 ರಂದು ಬೆಳಿಗ್ಗೆ ಗಣಪತಿ ಹವನ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಾಯಂಕಾಲ ದೀಪಾರಾಧನೆ, ಚೆಂಡೆವಾದನ, ರಾತ್ರಿ ಮಹಾಪೂಜೆ, ರಾತ್ರಿ ದೇವರಬಲಿ ಉತ್ಸವ ಹೊರಡುವುದು, ವಸಂತಕಟ್ಟೆ ಪೂಜೆ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ ನಡೆಯಲಿದೆ. ಬೆಳಗ್ಗೆ 6.00 ರಿಂದ ಸಂಜೆ 6.00 ತನಕ ಅರ್ಧ ಏಕಾಹ ಭಜನೆ ನಡೆಯಲಿದೆ.

ಫೆ. 22ರಂದು ಬೆಳಗ್ಗೆಯಿಂದ ಸಾಯಂಕಾಲ ತನಕ ಉಳ್ಳಾಗುಳು ಮತ್ತು ಪರಿವಾರ ದೈವಗಳ ನೇಮೋತ್ಸವ ನಡೆಯಲಿರುವುದು.

ಸಾಂಸ್ಕೃತಿಕ ಕಾರ್ಯಕ್ರಮ:

ಫೆ. 20ರಂದು ಸಂಜೆ ಗಂಟೆ 5 ರಿಂದ ಸ್ಥಳೀಯ ಅಂಗನವಾಡಿ ಮಕ್ಕಳಿಂದ ನೃತ್ಯ ಕಾರ್ಯಕ್ರಮ ಬಳಿಕ ಪ್ರಾಥಮಿಕ ಶಾಲಾ ವಿನೋದಾವಳಿಗಳು, ಹಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ಜರುಗಲಿದೆ. 7.45 ರಿಂದ ಹವ್ಯಾಕ್ಷ ಎಸ್‌ ಇವರಿಂದ ಯೋಗ ಪ್ರದರ್ಶನ ನಡೆಯಲಿದೆ. ರಾತ್ರಿ ಗಂಟೆ 9 ರಿಂದ ಕೌಸ್ತಭ ಕಲಾಸೇವಾ ಟ್ರಸ್ಟ್ ಕೂಜುಗೋಡು ಪ್ರಸ್ತುತಿಯಲ್ಲಿ “ಶ್ರೀರಾಮ ದರ್ಶನ ” ಮಕ್ಕಳ ಯಕ್ಷಗಾನ ನಡೆಯಲಿದೆ. ಬಳಿಕ ರಾತ್ರಿ ವಿವಿಧ ಸಂಘ ಸಂಸ್ಥೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಫೆ.21 ರಂದು ಸಂಜೆ 6.30 ರಿಂದ ಗೋಪಾಲಕೃಷ್ಣ ಯಕ್ಷಗಾನ ಸಂಘ ಕಾಸರಗೋಡು ಇವರಿಂದ ಯಕ್ಷಗಾನ ಗೊಂಬೆಯಾಟ “ಶ್ರೀ ದೇವಿ ಮಹಾತ್ಮೆ ” ನಡೆಯಲಿದೆ.

ಸಭಾ ಕಾರ್ಯಕ್ರಮ
ಫೆ.20 ರ ರಾತ್ರಿ ಸಭಾ ಕಾರ್ಯಕ್ರಮ ನಡೆಯಲಿದ್ದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಕೂಜುಗೋಡು ಅಧ್ಯಕ್ಷತೆ ವಹಿಸಲಿದ್ದಾರೆ. ವಿವೇಕಾನಂದನಂದ ಸ್ವಾಯತ್ತ ಮಹಾವಿದ್ಯಾಲಯ ಪುತ್ತೂರು ಇಲ್ಲಿನ ಉಪನ್ಯಾಸಕ ಡಾl ಶ್ರೀಶಕುಮಾರ್ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.