ನೆಲ್ಲೂರು ಕೆಮ್ರಾಜೆ ಪ್ರಾ. ಕೃ. ಪ. ಸ. ಸಂಘದಲ್ಲಿ ಮಾಧವ ಸುಳ್ಳಿ ಯವರು ನಿಧಾನರಾಗಿದ್ದ ಹಿನ್ನೆಲೆಯಲ್ಲಿ ತೆರವಾಗಿದ್ದ ಒಂದು ನಿರ್ದೇಶಕ ಸ್ಥಾನಕ್ಕೆ ಫೆ. 18ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ವಿನಯಚಂದ್ರ ಸುಳ್ಳಿ ಯವರನ್ನು ಕೋ ಆಪ್ಟ್ ಮಾಡಿಕೊಳ್ಳಲಾಗಿದೆ.
ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆಯಿತು.
ಈ ಸಂದರ್ಭದಲ್ಲಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸಂತೋಷ್, ಉಪಾಧ್ಯಕ್ಷ ಜಯಪ್ರಸಾದ್ ಸುಳ್ಳಿ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.
ವಿನಯಚಂದ್ರ ಸುಳ್ಳಿ ಯವರು ವಿವಿಧ ಸಂಘಟನೆಗಲ್ಲಿ ತೊಡಗಿಸಿಕೊಂಡಿದ್ದಾರೆ.