ಅದ್ದೂರಿ ಮೆರವಣಿಗೆ ಆರಂಭ

ಹಿರಿಯ ಸಾಹಿತಿ ಡಾ.ಪ್ರಭಾಕರ ಶಿಶಿಲರವರ ಅಧ್ಯಕ್ಷತೆಯಲ್ಲಿ ಮಂಗಳೂರು ವಿ.ವಿ.ಆವರಣದಲ್ಲಿ ನಢಯಲಿರುವ ದ.ಕ.ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹರೇಕಳ ಹಾಜಬ್ಬ ಮೆರವಣಿಗೆಗೆ ಚಾಲನೆ ನೀಡಿದರು.
ಡಾ.ಪ್ರಭಾಕರ ಶಿಶಿಲರವರನ್ನು ತೆರೆದ ವಾಹನದಲ್ಲಿ ಕುಳಿರಿಸಿ, ಮೆರವಣಿಗೆಯಲ್ಲಿ ಕರೆತರಲಾಯಿತು.

ವಿ.ವಿ.ಕುಲಪತಿ ಡಾ.ಪಿ.ಎಲ್
ಧರ್ಮ, ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್, ಸುಳ್ಯ ಕಸಾಪ ಘಟಕದ ಅಧ್ಯಕ್ಷ ಚಂದ್ರಶೇಖರ ಪೇರಾಲು ಸಹಿತ ಹಲವಾರು ಗಣ್ಯರು ಉಪಸ್ಥಿತರಿದ್ದರು.
