
ಫೆಬ್ರವರಿ 21 ರಂದು ರೋಟರಿ ವಿದ್ಯಾ ಸಂಸ್ಥೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಾಗಾರ ನಡೆಯಿತು.
ರೋಟರಿ ಕ್ಲಬ್ ಅಧ್ಯಕ್ಷರಾದ ರೊ. ಯೋಗಿತಾ ಗೋಪಿನಾಥ್ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಇಕೋ ಹಬ್ ಫೌಂಡೇಶನ್ ECO ವೈಶಾಖ ಕುಲಕರ್ಣಿ ಸ್ವಚ್ಛತೆ ಹಾಗೂ ಸುರಕ್ಷತೆಯ ಬಗ್ಗೆ ಮಾಹಿತಿ ನೀಡಿದರು.

ಸುಳ್ಯ ರೋಟರಿ ಕ್ಲಬ್ ನ ಸೆಕ್ರೆಟರಿ ಡಾl ಹರ್ಷಿತಾ ಪುರುಷೋತ್ತಮ್ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಶೋಭಾ ಬೊಮ್ಮೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವೀಣಾ ಶೇಡಿಕಜೆ ವಂದಿಸಿದರು. ವಿದ್ಯಾರ್ಥಿನಿಯರಾದ ಕು.ವಂದಿತಾ, ಕು.ಗಾನವಿ, ಕು.ನಿರೀಕ್ಷಾ ಪ್ರಾರ್ಥಿಸಿದರು.
ವಿದ್ಯಾರ್ಥಿನಿ ಕು. ಮನುಜ್ಞಾ ಕಾರ್ಯಕ್ರಮ ನಿರೂಪಿಸಿದರು.
