ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ರ ಪ್ರಕರಣ 106 ಗೆ ತಿದ್ದುಪಡಿ ದಿನಾಂಕ: 10/09/2024 ರಲ್ಲಿ ತಿದ್ದುಪಡಿ ತರಲಾಗಿದ್ದು, ಈ ತಿದ್ದುಪಡಿಯ ಪೂರ್ವದಲ್ಲಿ ಸೃಜಿಸಲಾದ ಅನಧಿಕೃತ ಆಸ್ತಿಗಳಿಗೆ ‘ ಬಿ’ ರಿಜಿಸ್ಟರ್ ನಲ್ಲಿ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.
ಸಾರ್ವಜನಿಕರು ಅಧಿಕೃತ ಸ್ವತ್ತುಗಳಿಗೆ ಎ ಖಾತಾ ನಮೂನೆ -3, ಅನಧಿಕೃತ ಸ್ವತ್ತುಗಳಿಗೆ ಖಾತಾ ನಮೂನೆ – 3 ವಹಿಯನ್ನು ನಿರ್ವಹಿಸಬೇಕಾಗಿರುವುದರಿಂದ ಸುಳ್ಯ ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಲ್ಲಾ ಆಸ್ತಿಗಳ ಮಾಲೀಕರುಗಳು ಈ ಕೆಳಕಂಡ ದಾಖಲಾತಿಗಳೊಂದಿಗೆ ಸುಳ್ಯ ಪಟ್ಟಣ ಪಂಚಾಯತ್ ಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಎ ಖಾತಾ ಸೃಜಿಸಲು ಅರ್ಜಿ, ಸರ್ಕಾರದಿಂದ ವಿತರಿಸಿದ ಯಾವುದೇ ಬಗೆಯ ಗುರುತಿನ ಚೀಟಿ, ಆಸ್ತಿ ಮಾಲಿಕರ ಪೋಟೋ ಮತ್ತು ಸ್ವತ್ತಿನ ಪೋಟೋ ಮಾಲಿಕತ್ತ ದೃಢೀಕರಿಸುವ ನೋಂದಾಯಿತ ಮಾರಾಟ ಪತ್ರಗಳು/ದಾನಪತ್ರ/ ವಿಭಾಗಪತ್ರ/ ಸರ್ಕಾರ ಅಥವಾ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕು ಪತ್ರಗಳು/ ಮಂಜೂರಾತಿ ಪತ್ರಗಳು/ ಮಂಜೂರಾತಿ ಪತ್ರಗಳು/ ಕಂದಾಯ ಇಲಾಖೆಯಿಂದ 94ಸಿಸಿ ಅಡಿ ನೀಡಲಾದ ಹಕ್ಕುಪತ್ರ.
ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಢೀಕೃತ ಪ್ರತಿ ಮತ್ತು ನಿವೇಶನಗಳ ಬಿಡುಗಡೆ ಪತ್ರ (ಏಕ ನಿವೇಶನ/ ಬಹುನಿವೇಶನ ಮಂಜೂರಾತಿ) ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪ್ರತಿ, ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ, ಮಾಲೀಕರ ಗುರುತಿನ ದಾಖಲೆ ಪ್ರತಿಯೊಂದಿಗೆ ಅರ್ಜಿ ಸಲ್ಲಿಸಬೇಕಾಗಿದೆ.
ಬಿ ರಿಜಿಸ್ಟರ್ ನಲ್ಲಿ ದಾಖಲಿಸಬೇಕಾದ ಆಸ್ತಿಗಳಿಗೆ ಇ-ಖಾತಾ ನೀಡಲು ಆಸ್ತಿಗೆ ಸಂಬಂಧಿಸಿದಂತೆ ಸ್ಮತ್ತಿನ ಮಾಲೀಕ ಸಾಬೀತುಪಡಿಸುವ ದಿನಾಂಕ: 10/09/2024 ರ ಪೂರ್ವದಲ್ಲಿ ನೋಂದಾಯಿತ ಮಾರಾಟ ಪತ್ರಗಳು/ದಾನಪತ್ರಗಳು/ ವಿಭಾಗ ಪತ್ರಗಳು/ ಹಕ್ಕು ಖುಲಾಸೆ ಪತ್ರಗಳು.
ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ, ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ, ಮಾಲೀಕರ ಪೋಟೋ ಮತ್ತು ಸ್ವತ್ತಿನ ಪೋಟೋ, ಮಾಲೀಕರ ಗುರುತಿನ ದಾಖಲೆ ಪ್ರತಿಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಸುಳ್ಯ ಪಟ್ಟಣ ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.