ಕೃಷಿಕರ ಉತ್ಪನ್ನಗಳನ್ನು ಮೌಲ್ಯವರ್ಧನಗೊಳಿಸುವ ರೈತ ಉತ್ಪಾದಕ ಸಂಸ್ಥೆಯ ಕಾರ್ಯ ಶ್ಲಾಘನೀಯ : ಎಸ್.ಅಂಗಾರ
ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ನೆರವಿನೊಂದಿಗೆ ಜಲಾನಯನ ಅಭಿವೃದ್ಧಿ ಇಲಾಖೆ , ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ ಮತ್ತು ಅಟಲ್ ಇನ್ಕ್ಯೂಬೇಷನ್ ಸೆಂಟರ್ ನಿಟ್ಟೆ ಇವರುಗಳ ಸಹಕಾರದಲ್ಲಿ ೩ ವರ್ಷದ ಹಿಂದೆ ಆರಂಭಗೊಂಡ ಸುಳ್ಯ ರೈತ ಉತ್ಪಾದಕ ಕಂಪೆನಿ ಇದರ ಎಲಿಮಲೆ ಶಾಖೆಯು ಫೆ.೨೧ರಂದು ಹೊನ್ನಾಡಿ ವಾಣಿಜ್ಯ ಸಂಕೀರ್ಣದಲ್ಲಿ ಉದ್ಘಾಟನೆಗೊಂಡಿತು.

ಮಾಜಿ ಸಚಿವ ಎಸ್.ಅಂಗಾರ ನೂತನ ಕಚೇರಿಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕೃಷಿ ಒಂದು ಸುಸ್ಥಿರ ಉದ್ಯಮಕವಾಗಿ ಬೆಳೆಯಬೇಕು. ಅದಕ್ಕಾಗಿ ರೈತರಿಗೆ ಸಮಯೋಚಿತ ತಾಂತ್ರಿಕ ಸಲಹೆಗಳು, ರಸಗೊಬ್ಬರ, ಮತ್ತು ಯಂತ್ರೋಪಕರಣಗಳು ಹಾಗೂ ಬೆಳೆದ ಉತ್ಪನ್ನಗಳಿಗೆ ಮಾರುಕಟ್ಟೆ ಜತೆಗೆ ಮೌಲ್ಯವರ್ಧನಗೊಳಿಸುವ ನಿಟ್ಟಿನಲ್ಲಿ ಹಾಗೂ ಕೃಷಿಕರ ಬಂಧುವಾಗಿ ರೈತ ಉತ್ಪಾದಕ ಸಂಸ್ಥೆಗಳು ಕೆಲಸ ಮಾಡುತ್ತಿದೆ” ಎಂದು ಹೇಳಿದರು.
ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಹೊನ್ನಪ್ಪ ಗೋವಿಂದೇ ಗೌಡ ರಸಗೊಬ್ಬರ ಮಳಿಗೆಯನ್ನು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷ ಎ.ವಿ.ತೀರ್ಥರಾಮ ಶುಭಹಾರೈಸಿದರು. ಸುಳ್ಯ ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಶ್ರೀಮತಿ ಸುಹಾನ, ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಿಷ್ಣು ಭಟ್ , ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಧನಂಜಯ, ಮರ್ಕಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಗೀತಾ ಎಚ್., ಮಡಪ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾ ಜಯರಾಮ, ಸುಳ್ಯ ರೈತ ಉತ್ಪಾದಕ ಕಂಪೆನಿಯ ಮಾಜಿ ನಿರ್ದೇಶಕ ಅಮೃತ ಕುಮಾರ್ ರೈ, ಕಟ್ಟಡ ಮಾಲಕರಾದ ಶ್ರೀಕೃಷ್ಣ ಭಟ್, ಸುಳ್ಯ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಗುರುಪ್ರಸಾದ್ ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಕಟ್ಟಡ ಮಾಲಕರಾದ ಶ್ರೀಕೃಷ್ಣ ಭಟ್ ದಂಪತಿಗಳನ್ನು ಸನ್ಮಾನಿಸಲಾಯಿತು.
ಸುಳ್ಯ ರೈತ ಉತ್ಪಾದಕ ಸಂಸ್ಥೆಯ ಅಧ್ಯಕ್ಷರಾದ ವೀರಪ್ಪ ಗೌಡ ಕಣ್ಕಲ್ ಅಧ್ಯಕ್ಷತೆ ವಹಿಸಿ, ಪ್ರಾಸ್ತಾವಿಕ ಮಾತನಾಡಿ ಸಂಸ್ಥೆಯ ಬೆಳವಣಿಗೆ ಹಾಗೂ ಚಟುವಟಿಕೆಗಳ ಕುರಿತು ವಿವರ ನೀಡಿದರು.
ನಿರ್ದೇಶಕರಾದ ವಿಜಯ ಕುಮಾರ್ ಎಂ.ಡಿ. ಸ್ವಾಗತಿಸಿ, ಕಾರ್ಯನಿರ್ವಹಣಾಧಿಕಾರಿ ಹರೀಶ್ ವಂದಿಸಿದರು. ನಿರ್ದೇಶಕರಾದ ಶ್ರೀಮತಿ ಮಧುರಾ ಎಂ.ಆರ್. ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದ ಬಳಿಕ ರೈತರಿಗೆ ಅಡಿಕೆ ತೋಟ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ ನಡೆಯಿತು. ಡಾ| ನಾಗರಾಜ್ ವಿಜ್ಞಾನಿಗಳು ಸಿಪಿಸಿಆರ್ ಐ ವಿಟ್ಲ, ಇಂಟೋಫಿಲ್ ಇಂಡಸ್ಟ್ರೀಸ್ ಕಂಪೆನಿಯ ಅಧಿಕಾರಿ ಹರೀಶ್ ಎಂ ರವರು ಅಡಿಕೆ ತೋಟ ನಿರ್ವಹಣೆ, ರಸಗೊಬ್ಬರ ಬಳಕೆ, ಮಣ್ಣು ಪರೀಕ್ಷೆಯ ಅವಶ್ಯಕತೆ ಬಗ್ಗೆ ಉಪಯುಕ್ತ ಮಾಹಿತಿಯನ್ನು ನೀಡಿದರು.
ಮಧ್ಯಾಹ್ನ ಭೋಜನದ ಬಳಿಕ ಶಿವಮೊಗ್ಗ ಮೇ.ಮೆಟನ್ ಕಂಪೆನಿಯವರ ಅಡಿಕೆ ಮರಕ್ಕೆ ಹತ್ತುವ ಯಂತ್ರದ ಬಗ್ಗೆ ಪ್ರಾತ್ಯಕ್ಷತೆ ನಡೆಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರುಗಳಾದ ಭಾಸ್ಕರ ನಾಯರ್ ಅರಂಬೂರು, ದೇವರಾಜ್ ಆಳ್ವ ಐವರ್ನಾಡು, ಸತ್ಯಪ್ರಸಾದ್ ಅಮರಪಡ್ನೂರು, ಶ್ರೀಶಕುಮಾರ್ ಮಾಯಿಪಡ್ಕ, ಸುರೇಶ್ ರೈ ಬಾಳಿಲ, ರಾಮಕೃಷ್ಣ ಬೆಳ್ಳಾರೆ, ಲೋಹಿತ್ ಕೊಡಿಯಾಲ, ಧರ್ಮಪಾಲ ಐವರ್ನಾಡು, ಗೋವಿಂದ ಮರ್ಕಂಜ ಹಾಗೂ ಸಂಸ್ಥೆಯ ಸಿಬ್ಬಂದಿಗಳು, ಗ್ರಾಮ ಪಂಚಾಯತ್, ಸಹಕಾರಿ ಸಂಘದ ನಿರ್ದೇಶಕರುಗಳು ಹಾಗೂ ಕೃಷಿಕರು ಉಪಸ್ಥಿತರಿದ್ದರು.