
ಅರಂತೋಡು ಗ್ರಾಮ ಪಂಚಾಯತ್‌ನ ಮಹತ್ವಕಾಂಕ್ಷಿ ಯೋಜನೆಯಾದ ಸ್ವಚ್ಛತಾ ಆಂದೋಲನದ ಅಂಗವಾಗಿ ನಿರಂತರವಾಗಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ ೬೯ ತಿಂಗಳ ಕಾರ್ಯಕ್ರಮವು ಶ್ರೀ ದುರ್ಗಾ ಗೆಳೆಯರ ಬಳಗದ ಸಹಯೋಗದೊಂದಿಗೆ ಫೆ. ೨೩ ರಂದು ನಡೆಯಿತು.
ಈ ಕಾರ್ಯಕ್ರಮದಲ್ಲಿ ಶ್ರೀ ದುರ್ಗಾ ಗೆಳೆಯರ ಬಳಗದ ಸದಸ್ಯರು, ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗ, ಸ್ವಚ್ಛತಾ ಘಟಕದ ಸಿಬ್ಬಂದಿ ಮತ್ತು ಊರ ನಾಗರಿಕರು ಭಾಗವಹಿಸಿದ್ದರು.