ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಫೆ. 22 ರಂದು ಶಾಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು ಜೆ ಅವರ ನಿರ್ದೇಶನದಂತೆ ಕೆವಿಜಿ ದಂತ ಮಹಾವಿದ್ಯಾಲಯದ ಮೌಖಿಕ ರೋಗಶಾಸ್ತ್ರ ಮತ್ತು ಜೀವ ವಿಜ್ಞಾನ ವಿಭಾಗದ ವತಿಯಿಂದ ಬಾಯಿಯ ಕ್ಯಾನ್ಸರ್ ಜಾಗೃತಿ ಅಭಿಯಾನವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಡಾ. ಸೈದಾ ನೂರ್ ಜೋಹ್ರ, ಡಾ. ಆಲ್ಫಿ ಜಾಸ್ಸಿ, ಡಾ. ಆಶಿಫ್ ಜೈದ್, ಡಾ. ಕಾರ್ಲಿನ್ ಲೆನಿ ಕಾರ್ಡೋಜ, ಡಾ. ಚೈತನ್ಯ ಮತ್ತು ಡಾ. ಮೊಹಮ್ಮದ್ ಅಲಿ ಸಹಲ್ 8 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬಾಯಿಯ ಕ್ಯಾನ್ಸರ್ ಎಂದರೇನು? ಅದನ್ನು ಹೇಗೆ ಕಂಡುಹಿಡಿಯಬಹುದು? ಅದಕ್ಕಾಗಿ ಯಾವ ರೀತಿಯ ಮುಂಜಾಗ್ರತೆಯನ್ನು ವಹಿಸಿಕೊಳ್ಳಬೇಕು? ಎಂಬಿತ್ಯಾದಿ ಮಾಹಿತಿಗಳ ಬಗ್ಗೆ ತಿಳಿಸಿದರು. ಶಾಲಾ ಉಪ ಪ್ರಾಂಶುಪಾಲೆ ಶಿಲ್ಪಾ ಬಿದ್ದಪ್ಪ ಸ್ವಾಗತಿಸಿ, ವಂದಿಸಿದರು . ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.