ಪಂಜ ಕ್ಲಸ್ಟರ್ ಮಟ್ಟದ ಬುನಾದಿ ಸಾಕ್ಷರತೆ ಮತ್ತು ಸಂಖ್ಯಾಜ್ಞಾನ ಕಲಿಕಾ ಹಬ್ಬ ಫೆ.20 ರಂದು ಪಂಜ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಜಯಲಕ್ಷ್ಮಿ ಜಳಕದ ಹೊಳೆ ದೀಪ ಬೆಳಗಿಸಿ, ಕಲಿಕಾ ಕೊಳಕ್ಕೆ ಗಾಳ ಹಾಕುವುದರ ಮೂಲಕ ಉದ್ಘಾಟನೆ ನೆರವೇರಿಸಿದರು.

ಎಸ್.ಡಿ.ಎಂ.ಸಿ ಅಧ್ಯಕ್ಷ ಲಿಗೋದರ ಆಚಾರ್ಯ ಎನ್ ಸಭಾಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಸೌಮ್ಯಶ್ರೀ, ರಾಜ್ಯ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಸರೋಜಿನಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸುಬ್ರಹ್ಮಣ್ಯ ಹಾಗೂ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಜಯಂತ ಕೆ , ಮುಖ್ಯಗುರು ಶ್ರೀಮತಿ ಲೀಲಾಕುಮಾರಿ ಟಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ. 7 ನೇ ತರಗತಿ ವಿದ್ಯಾರ್ಥಿ ಪ್ರಜ್ವಲ್ ಪ್ರಾರ್ಥಿಸಿದರು. ಮುಖ್ಯ ಗುರು ಲೀಲಾಕುಮಾರಿ ಸ್ವಾಗತಿಸಿದರು. ಸಿ.ಆರ್.ಪಿ ಜಯಂತ ಕೆ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಶಿಕ್ಷಕಿ ನೇತ್ರಾವತಿಯವರು ವಂದಿಸಿದರು. ಪಂಜ ಕ್ಲಸ್ಟರ್ ನ ಎಲ್ಲಾ ಪ್ರಾಥಮಿಕ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
