Home Uncategorized ನಾಗಪಟ್ಟಣ ಸದಾಶಿವ ದೇವಳದಲ್ಲಿ ಮಹಾ ಶಿವರಾತ್ರಿ ಉತ್ಸವ

ನಾಗಪಟ್ಟಣ ಸದಾಶಿವ ದೇವಳದಲ್ಲಿ ಮಹಾ ಶಿವರಾತ್ರಿ ಉತ್ಸವ

0

ನಾಗಪಟ್ಟಣ ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಉತ್ಸವವು ಫೆ.26 ರಂದು ಜರುಗಿತು.

ಉತ್ಸವದ ಅಂಗವಾಗಿ ಪೂರ್ವಾಹ್ನ ಅರ್ಚಕರಿಂದ ಉಷಾ ಪೂಜೆಯಾಗಿ ಪ್ರಸಾದ ವಿತರಣೆಯಾಯಿತು. ಶಿವರಾತ್ರಿ ಉತ್ಸವದ ಪ್ರಯುಕ್ತ ವಿಶೇಷವಾಗಿ ಏಕಾದಶ ರುದ್ರಾಭಿಷೇಕ ಸೇವೆಯು ನಡೆಯಿತು.


ಮಧ್ಯಾಹ್ನ ಮಹಾಪೂಜೆಯಾಗಿ ಪ್ರಸಾದ ವಿತರಣೆಯಾಗಿ ಸಾರ್ವಜನಿಕ ಅನ್ನ ಸಂತರ್ಪಣೆಯಾಯಿತು. ಸಂಜೆದೀಪಾರಾಧನೆಯೊಂದಿಗೆ ಶ್ರೀ ಶಾಸ್ತಾವೇಶ್ವರ ಭಜನಾ ಸಂಘದ ಸದಸ್ಯರಿಂದ ಭಜನಾ ಸಂಕೀರ್ತನೆಯು ನಡೆದು
ರಾತ್ರಿಮಂಗಳಾಚರಣೆಯಾಗಿ ಮಹಾಪೂಜೆಯಾಗಿ ಪ್ರಸಾದ ವಿತರಣೆಯಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಕೋಲ್ಚಾರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಗ್ರಾಮದ ಹಾಗೂ ಪಟ್ಟಣ ಪ್ರದೇಶದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರಸಾದ ಸ್ವೀಕರಿಸಿದರು.

NO COMMENTS

error: Content is protected !!
Breaking