ನೆಲ್ಲೂರು ಕೆಮ್ರಾಜೆ : ಸ್ಪೂರ್ತಿ ಸಂಜೀವಿನಿ ಒಕ್ಕೂಟದ ಮಹಾಸಭೆ

0

ಗ್ರಾಮ ಪಂಚಾಯತ್ ನೆಲ್ಲೂರು ಕೆಮ್ರಾಜೆ, ಸ್ಪೂರ್ತಿ ಸಂಜೀವಿನಿ ಒಕ್ಕೂಟ ನೆಲ್ಲೂರು ಕೆಮ್ರಾಜೆ ಇದರ ಆಶ್ರಯದಲ್ಲಿ ವಾರ್ಷಿಕ ಮಹಾಸಭೆ ಹಾಗೂ ಸನ್ಮಾನ ಕಾರ್ಯಕ್ರಮವು ಫೆ. 25 ರಂದು ನೆಲ್ಲೂರು ಕೆಮ್ರಾಜೆ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ನೆಲ್ಲೂರು ಕೆಮ್ರಾಜೆ ಗ್ರಾ.ಪಂ. ಅಧ್ಯಕ್ಷ ಧನಂಜಯಕುಮಾರ್ ಉದ್ಘಾಟಿಸಿದರು. ಸ್ಪೂರ್ತಿ ಸಂಜೀವಿನಿ ಒಕ್ಕೂಟಕದ ಅಧ್ಯಕ್ಷೆ ಶ್ರೀಮತಿ ಮಮತಾ ಎಂ.ಕೆ. ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ನೆಲ್ಲೂರು ಕೆಮ್ರಾಜೆ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ವಂದನಾ ಹೊಸ್ತೋಟ, ಎನ್.ಆರ್.ಎಲ್.ಎಂ. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಶ್ರೀಮತಿ ಶ್ವೇತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಪತಿ ಡಿ., ಕೃಷಿ ಜೀವನೋಪಾಯ ಬ್ಲಾಕ್ ಮೆನೇಜರ್ ಜೀವನ್ ಪ್ರಕಾಶ್, ಎನ್.ಆರ್.ಎಲ್.ಎಂ. ವಲಯ ಬ್ಲಾಕ್ ಮೆನೇಜರ್ ಶ್ರೀಮತಿ ರೂಪಾ , ಶ್ರೀಮತಿ ಜಯಲಕ್ಷ್ಮಿ ಭಾಗವಹಿಸಿದ್ದರು.

ಸಂಜೀವನಿ ಒಕ್ಕೂಟದ ಸದಸ್ಯರಿಗೆ ನಡೆಸಿದ ವಿವಿಧ ಸಾಂಸ್ಕೃತಿಕ ಹಾಗೂ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಂಜೀವಿನಿ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷೆ ಶ್ರೀಮತಿ ಇಂದಿರಾ ಗುಡ್ಡನಮನೆ, ನಿಕಟಪೂರ್ವ ಕಾರ್ಯದರ್ಶಿ ಶ್ರೀಮತಿ ಚಂದ್ರಾವತಿ ಗುಡ್ಡನಮನೆ ಅವರನ್ನು ಸನ್ಮಾನಿಸಲಾಯಿತು. ಅದೃಷ್ಟ ಚೀಟಿಯ ಫಲಿತಾಂಶ ನೆರವೇರಿಸಲಾಯಿತು.

ಒಕ್ಕೂಟದ ಕಾರ್ಯದರ್ಶಿ ಶ್ರೀಮತಿ ಶಾಲಿನಿ ಹರಿಪ್ರಸಾದ್ ಎಲಿಮಲೆ ಸ್ವಾಗತಿಸಿ, ಪಂ.ಸದಸ್ಯೆ ಶ್ರೀಮತಿ ಶೀಲಾವತಿ ಬೊಳ್ಳಾಜೆ ವಂದಿಸಿದರು. ಶಾಲಿನಿ, ಭವ್ಯಾ, ಕಾವ್ಯ ಪ್ರಾರ್ಥಿಸಿದರು. ಶ್ರೀಮತಿ ಭವ್ಯ ಕಜೆ ಕಾರ್ಯಕ್ರಮ ನಿರೂಪಿಸಿದರು.

ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು, ಎನ್.ಆರ್.ಎಲ್. ಎಂ. ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಸದಸ್ಯರು ಸಹಕರಿಸಿದರು.