ಕೆ.ವಿ.ಜಿ. ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆ : ಓರಲ್ ಪೆಥಾಲಜಿ ಮತ್ತು ಮೈಕ್ರೋಬಯಾಲಜಿ ವಿಭಾಗದ ವತಿಯಿಂದ ಪ್ರೊಫೆಶನಲ್ ಎಥಿಕ್ಸ್ ಕಾರ್ಯಾಗಾರ

0

ಕೆ.ವಿ.ಜಿ. ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಓರಲ್ ಪೆಥಾಲಜಿ ಮತ್ತು ಮೈಕ್ರೋಬಯಾಲಜಿ ವಿಭಾಗದ ವತಿಯಿಂದ ನಿರಂತರ ಕಲಿಕಾ ಕಾರ್ಯಕ್ರಮದ ಭಾಗವಾಗಿ ಪ್ರೊಫೆಶನಲ್ ಎಥಿಕ್ಸ್ ಕಾರ್ಯಾಗಾರವನ್ನು  ಫೆಬ್ರವರಿ ೨೮ ರಂದು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ  ಎ.ಬಿ. ಶೆಟ್ಟಿ ಮೆಮೋರಿಯಲ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್, ಮಂಗಳೂರು ಇದರ ವಿಭಾಗ ಮುಖ್ಯಸ್ಥರು  ಡಾ| ಆಡ್ರಿ ಮಡೋನ್ನ ಡಿಕ್ರುಜ್ ಭಾಗವಹಿಸಿದರು.






ಕಾರ್ಯಕ್ರಮವು ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಉಪಪ್ರಾಂಶುಪಾಲೆ ಹಾಗೂ ವಿಭಾಗ ಮುಖ್ಯಸ್ಥೆ ಡಾ| ಶೈಲಾ ಎಂ. ಪೈ ಯವರು   ಸ್ವಾಗತಿಸಿದರು.   ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೊಫೆಸರ್ ಡಾ| ಉಜ್ವಲ್ ಯು.ಜೆ. ಅವರು ಉಪಸ್ಥಿತರಿದ್ದು, ಶುಭಹಾರೈಸಿದರು. 



ಪ್ರಾಂಶುಪಾಲೆ ಡಾ| ಮೋಕ್ಷಾ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ಹೇಳಿದರು. ಈ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ರಂಗೋಲಿ, ಕಾರ್ವಿಂಗ್, ಇಪೋಸ್ಟರ್, ಮತ್ತು ರೀಲ್ ಮೇಕಿಂಗ್ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ವಿಭಾಗದ ಉತ್ತಮ ಶೈಕ್ಷಣಿಕ ಶ್ರೇಷ್ಠತೆ ಹೊಂದಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಓರಲ್ ಕ್ಯಾನ್ಸರ್ ಅವೇರ್ನೆಸ್ ಕಾರ್ಯಕ್ರಮವನ್ನು ನಡೆಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ನೀಡಲಾಯಿತು. ಡಾ| ಅಮೃತರವರು ಸಂಪನ್ಮೂಲ ವ್ಯಕ್ತಿಯನ್ನು ಸಭೆಗೆ ಪರಿಚಯಿಸಿದರು. ಕಾರ್ಯಕ್ರಮದ ವಂದನಾರ್ಪಣೆಯನ್ನು ಡಾ| ಸುಪ್ರಿಯಾ ಎಚ್., ರೀಡರ್ ಅವರು ನಿರ್ವಹಿಸಿದರು. ದಂತಮಹಾವಿದ್ಯಾಲಯದ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.