ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು 2024-25ನೇ ಸಾಲಿನ ವೈದ್ಯಕೀಯ ಸ್ನಾತಕೋತ್ತರ ಪದವಿ ಮತ್ತು ಪದವಿ ವಿಭಾಗದ ರ‍್ಯಾಂಕ್ ಪಟ್ಟಿಯನ್ನು ಪ್ರಕಟಿಸಿದ್ದು, ಕಾಲೇಜಿನ ವಿದ್ಯಾರ್ಥಿಗಳು ಒಟ್ಟು 08 ರ‍್ಯಾಂಕ್ ಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಸ್ನಾತಕೋತ್ತರ ಪದವಿಯ ತುರ್ತು ವೈದ್ಯಕೀಯ ವಿಭಾಗದಲ್ಲಿ ಡಾ. ಕಿರಣ್ ತಟ್ಟಿ 3ನೇ ರ್ಯಾಂಕ್ ಮತ್ತು ಡಾ. ಸ್ನೇಹಿತ್ ಸಿ. ಪಾಟೀಲ್ 8ನೇ ರ‍್ಯಾಂಕ್ ಪಡೆದುಕೊಂಡಿರುತ್ತಾರೆ. ಇವರು ತುರ್ತು ವೈದ್ಯಕೀಯ ವಿಭಾಗದ ಮೊದಲ ಬ್ಯಾಚ್‌ನ ವಿದ್ಯಾರ್ಥಿಗಳಾಗಿರುತ್ತಾರೆ.
ವೈದ್ಯಕೀಯ ಪದವಿ ವಿಭಾಗದಲ್ಲಿ ನಿತಿನ್ ದ್ವಿವೇದಿ ತೃತೀಯ ಎಂ.ಬಿ.ಬಿ.ಎಸ್.ನಲ್ಲಿ 4ನೇ ರ‍್ಯಾಂಕ್ , ಜೀವರಾಸಾಯನ ಶಾಸ್ತ್ರ ವಿಭಾಗದಲ್ಲಿ 1ನೇ ರ‍್ಯಾಂಕ್ , ನ್ಯಾಯ ವೈದ್ಯಶಾಸ್ತ್ರ ವಿಭಾಗದಲ್ಲಿ 4ನೇ ಬ್ಯಾಂಕ್ ಹಾಗೂ ಸಮುದಾಯ ವಿಜ್ಞಾನ ಶಾಸ್ತ್ರದಲ್ಲಿ 3ನೇ ರ‍್ಯಾಂಕ್ ಪಡೆದುಕೊಂಡಿರುತ್ತಾರೆ, ಕನಿಕಾ ಸಿಹಾಗ್ ನ್ಯಾಯ ವೈದ್ಯಶಾಸ್ತ್ರ ವಿಭಾಗದಲ್ಲಿ 8ನೇ ರ್ಯಾಂಕ್ ಮತ್ತು ಇಶು ಬಿರ್ಹ್ವಮನ್, ಸ್ತ್ರೀ ರೋಗ ಮತ್ತು ಪ್ರಸೂತಿ ಚಿಕಿತ್ಸಾ ಶಾಸ್ತ್ರ ವಿಭಾಗದಲ್ಲಿ 6ನೇ ರ‍್ಯಾಂಕ್ ಪಡೆದುಕೊಂಡಿರುತ್ತಾರೆ.
ಕಾಲೇಜಿನ ಆಡಳಿತಮಂಡಳಿ, ಡೀನ್, ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳ ಈ ಸಾಧನೆಯನ್ನು ಅಭಿನಂದಿಸಿರುತ್ತಾರೆ.