ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ: ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

0

ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇಲ್ಲಿ
ರಾಷ್ಟ್ರೀಯ ವಿಜ್ಞಾನ ಆಚರಣೆ ಮಾಡಲಾಯಿತು.

ಈ ಕಾರ್ಯಕ್ರಮವನ್ನು ಕುಮಾರಸ್ವಾಮಿ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ಶ್ರೀಮತಿ ದುರ್ಗಾಲಕ್ಷ್ಮಿ ಉದ್ಘಾಟಿಸಿದರು. ವೇದಿಕೆಯಲ್ಲಿ ಶಾಲಾ ಸಂಚಾಲಕರಾದ ಚಂದ್ರಶೇಖರ್ ನಾಯರ್, ಕಾಲೇಜಿನ ಪ್ರಾಂಶುಪಾಲರಾದ ಡಾl ಸಂಕೀರ್ತ್ ಹೆಬ್ಬಾರ್, ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾರತ್ನ ಹಾಗೂ ವಿಜ್ಞಾನ ಶಿಕ್ಷಕಿ ಶ್ರೀಮತಿ ಸುವರ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕುಮಾರಿ ಶ್ರೀಯ ನಿರೂಪಿಸಿದಳು. ನಂತರ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಹಲವಾರು ಪ್ರಯೋಗಗಳನ್ನು ಪ್ರದರ್ಶಿಸಿದರು.