ಗೆಳೆಯರ ಬಳಗ ಐವರ್ನಾಡು ಸಹಕಾರದೊಂದಿಗೆ ಸ್ವಚ್ಛತೆ
ತನಕ ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಗೆಳೆಯರ ಬಳಗ ಐವರ್ನಾಡು ರವರ ಸಹಯೋಗದೊಂದಿಗೆ ಮಾ.02 ರಂದು ನಡೆಯಿತು.
ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆಯ ಬದಿಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ವಠಾರದಿಂದ
ಸರಕಾರಿ ಪದವಿ ಪೂರ್ವ ಕಾಲೇಜು ಐವರ್ನಾಡಿನ ವಠಾರದವರೆಗೆ ನಡೆಯಿತು.




ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ನ ಅಧ್ಯಕ್ಷರು,ಉಪಾಧ್ಯಕ್ಷರು ಐವರ್ನಾಡು ಗ್ರಾಮ ಪಂಚಾಯತ್ ಸದಸ್ಯರುಗಳು ಹಾಗೂ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು,ಸಿಬ್ಬಂದಿಗಳು,ಡಿಸಿಸಿ ಬ್ಯಾಂಕ್ ನ ನಿರ್ದೇಶಕರು, ಐವರ್ನಾಡು ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು, ಗೆಳೆಯರ ಬಳಗ ಐವರ್ನಾಡಿನ ಗೌರವಾಧ್ಯಕ್ಷರು, ಅಧ್ಯಕ್ಷರು, ಸಂಚಾಲಕರು, ಕಾರ್ಯದರ್ಶಿ ಹಾಗೂ ಸದಸ್ಯರುಗಳು, ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರುಗಳು,ಗ್ರಂಥಾಲಯ ಮೇಲ್ವಿಚಾರಕರು, ಕೃಷಿ ಸಖಿ, ಸಂಜೀವಿನಿ ಸಂಘದ ಸದಸ್ಯರುಗಳು ಊರಿನ ಪ್ರಮುಖರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಗೆಳೆಯರ ಬಳಗ ಐವರ್ನಾಡಿನವರು ಲಘು ಉಪಹಾರದ ವ್ಯವಸ್ಥೆ ಮಾಡಿದ್ದರು.