ಫೆ. 28 ರಿಂದ ಮಾರ್ಚ್ 2 ರವರೆಗೆ ನಡೆದ ಹಂಪಿ ಉತ್ಸವದಲ್ಲಿ ವಿರೂಪಾಕ್ಷೇಶ್ವರ ದೇವಾಲಯ ವೇದಿಕೆಯಲ್ಲಿ ಹಮ್ಮಿಕೊಂಡ ಮಹಿಳಾ ವಿಚಾರಗೋಷ್ಠಿಯಲ್ಲಿ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ, ವ್ಯಕ್ತಿತ್ವ ವಿಕಸನ ತರಬೇತುದಾರರೂ ಆದ ಡಾ. ಅನುರಾಧಾ ಕುರುಂಜಿಯವರು ಪ್ರಬಂಧ ಮಂಡನೆ ಮಾಡಿದರು.



ಮಹಿಳಾ ಚಿಂತಕಿ ಶೈಲಜ ಹಿರೇಮಠ್ ಉದ್ಘಾಟಿಸಿದ , ಸಾಹಿತಿಗಳಾದ ಎಸ್ ವಿ ಪಾಟೀಲ್ ಅಧ್ಯಕ್ಷತೆ ವಹಿಸಿದ್ದ ವಿಚಾರ ಗೋಷ್ಠಿಯಲ್ಲಿ ಡಾ. ಅನುರಾಧಾ ಕುರುಂಜಿಯವರು “ವಿಜಯನಗರ ಕಾಲದ ಮಹಿಳೆ ಮತ್ತು ಮನೋರಂಜನಾ ಕ್ರೀಡೆಗಳು” ಎಂಬ ವಿಷಯದ ಕುರಿತು ಪ್ರಬಂಧ ಮಂಡಿಸಿದ್ದರು.