ಕೆವಿಜಿ ಅಮರಜ್ಯೋತಿ ಪಿ.ಯು ಕಾಲೇಜಿನಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

0

ನಿರಂತರ ಶ್ರಮ ಯಶಸ್ಸಿಗೆ ಕಾರಣ : ಡಾ. ಉಜ್ವಲ್ ಯು.ಜೆ.

ಕೆವಿಜಿ ಅಮರಜ್ಯೋತಿಯಲ್ಲಿ ದ್ವಿತೀಯ ಪಿ.ಯು ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮದಲ್ಲಿ ಕಾಲೇಜಿನ ಸಿ.ಇ.ಒ ಡಾ. ಉಜ್ವಲ್ ಯು.ಜೆ ಮಾತನಾಡಿ ಶೈಕ್ಷಣಿಕ ಸಾಧನೆಯ ದೃಷ್ಟಿಯಿಂದ ದ್ವಿತೀಯ ಪಿ.ಯು ವಿದ್ಯಾರ್ಥಿಗಳಿಗೆ ಮಹತ್ವದ ವರ್ಷ. ಆದುದರಿಂದ ತಮ್ಮ ಶ್ರಮವನ್ನು ಹಾಕುವುದರ ಮೂಲಕ ಉತ್ತಮ ಮಟ್ಟದ ಶೈಕ್ಷಣಿಕ ಸಾಧನೆ ಮಾಡುವಂತೆ ಹಾಗೂ ವಿದ್ಯಾರ್ಥಿಗಳಿಗೆ ಪ್ರೊಫೆಷನಲ್ ಕೋರ್ಸ್ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿ ನೀಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ ಮಾತನಾಡುತ್ತಾ ವಿದ್ಯಾರ್ಥಿಗಳು ಇಂದಿನಿಂದಲೇ ಶ್ರದ್ದೆಯಿಂದ ಸಂಪೂರ್ಣವಾಗಿ ಅಧ್ಯಯನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಉತ್ತಮ ಫಲಿತಾಂಶ ಬರುವಂತಾಗಲಿ ಎಂದು ಶುಭ ಹಾರೈಸಿದರು.

ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಡಾ. ರೇಣುಕಾ ಪ್ರಸಾದ್ ಕೆ ವಿ,ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ದೀಪಕ್ ವೈ.ಆರ್ ಸ್ವಾಗತಿಸಿ, ಉಪನ್ಯಾಸಕಿ ಅರ್ಪಿತಾ ಕೆ.ಎನ್ ವಂದಿಸಿದರು.