ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಪೇರಾಲು ಇಲ್ಲಿ ಮಾ.4 ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರಯುಕ್ತ ಸೈನ್ಸ್ ಫೆಸ್ಟ್ ನಡೆಯಿತು.

ಕಾರ್ಯಕ್ರಮದಲ್ಲಿ ಇಲಾಖಾ ವತಿಯಿಂದ ಶಿಕ್ಷಣ ಸಂಯೋಜಕರಾದ ಶ್ರೀಮತಿ ಧನಲಕ್ಷ್ಮಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ದೇವದಾಸ್ ಕುಕ್ಕುಡೇಲು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಮೋಹನ್ ದಾಸ್ ಕುಕ್ಕುಡೇಲು ಹಾಗೂ ಶಾಲೆಯ ಮುಖ್ಯ ಗುರುಗಳಾದ ಶ್ರೀಮತಿ ಶಿಲ್ಪಾ ಗಾಣಿಗ ಇವರು ಉಪಸ್ಥಿತರಿದ್ದರು.
ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರಯುಕ್ತ ಹಾಗೂ ಇಕೋ ಕ್ಲಬ್ ವತಿಯಿಂದ ನಡೆಸಿದ ಸ್ಪರ್ಧೆಗಳಲ್ಲಿ ವಿಜೇತರಾದವರೆಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು.

ಪ್ರಾರಂಭದಲ್ಲಿ ಶಾಲೆಯ ಮುಖ್ಯ ಗುರುಗಳಾದ ಶ್ರೀಮತಿ ಶಿಲ್ಪಾ ಗಾಣಿಗ ಇವರು ವಿಜ್ಞಾನದ ಕೆಲವು ಪ್ರಯೋಗಗಳನ್ನು ಮಾಡುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಕುತೂಹಲ ಮೂಡಿಸಿದರು.
ಶಾಲೆಯ ಎಲ್ಲಾ ವಿದ್ಯಾರ್ಥಿಗಳು ವಿಜ್ಞಾನ ಪ್ರಯೋಗ ಪ್ರದರ್ಶನ ಮಾಡುವುದರ ಮೂಲಕ ವಿಜ್ಞಾನದ ಪರಿಕಲ್ಪನೆಗಳ ಹಬ್ಬವನ್ನು ಆಚರಿಸಿದರು.