Home ಪ್ರಚಲಿತ ಸುದ್ದಿ ಎಸ್.ಡಿ.ಪಿ.ಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ ಫೈಝಿ ಯವರ ಅಕ್ರಮ ಬಂಧನಕ್ಕೆ ಖಂಡನೆ

ಎಸ್.ಡಿ.ಪಿ.ಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ ಫೈಝಿ ಯವರ ಅಕ್ರಮ ಬಂಧನಕ್ಕೆ ಖಂಡನೆ

0

ಸುಳ್ಯ ವಿಧಾನಸಭಾ ಕ್ಷೇತ್ರದ ಹಲವಡೆ ದಿಡೀರ್ ಪ್ರತಿಭಟನೆ

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ ಯವರ ಮೇಲೆ ಸುಳ್ಳು ಆರೋಪ ಹೊರಿಸಿ ಬಂಧನ ಮಾಡಿರುವುದರ ವಿರುದ್ಧ ರಾಷ್ಟ್ರಾದ್ಯಂತ ಹಮ್ಮಿಕೊಂಡ ದಿಡೀರ್ ಪ್ರತಿಭಟನೆಯ ಭಾಗವಾಗಿ SDPI ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವೆಡೆ ಪ್ರತಿಭಟನೆಯನ್ನು ಮಾಡಲಾಯಿತು.
ಸುಳ್ಯ ಬ್ಲಾಕ್ ಸಮಿತಿ ವತಿಯಿಂದ ಗಾಂಧಿ ಪಾರ್ಕ್ (ಮಹಾತ್ಮ ಗಾಂಧಿಯವರ ಪುತ್ತಳಿಯ ಮುಂಭಾಗ)
ಬೆಳ್ಳಾರೆ ಬ್ಲಾಕ್ ಸಮಿತಿ ವತಿಯಿಂದ ಸವಣೂರು ಜಂಕ್ಷನ್, ಕಡಬ ಬ್ಲಾಕ್ ಸಮಿತಿ ವತಿಯಿಂದ ನೆಲ್ಯಾಡಿ ಪೇಟೆ ಮತ್ತಿತರ ಕಡೆಗಳಲ್ಲಿ ಪ್ರತಿಭಟನೆಯನ್ನು ಆಯೋಜಿಸಲಾಯಿತು.

NO COMMENTS

error: Content is protected !!
Breaking