ಕಲ್ಮಡ್ಕ ಗ್ರಾ.ಪಂ. ವ್ಯಾಪ್ತಿಯ ಸಪ್ತಶ್ರೀ ಸ್ತ್ರೀಶಕ್ತಿ ಗೊಂಚಲು ಸಮಿತಿಯ ಸಭೆ ಮಾ. 5ರಂದು ಪಡ್ಪಿನಂಗಡಿಯ ಶಿವಗೌರಿ ಕಲಾಮಂದಿರದಲ್ಲಿ ನಡೆಯಿತು. ಸಮಿತಿಯ ಅಧ್ಯಕ್ಷೆ ಭವಾನಿ ಆಕ್ರಿಕಟ್ಟೆ, ಕಾರ್ಯದರ್ಶಿ ಮಮತಾ ಕಾಪಡ್ಕ, ಗೌರವಾಧ್ಯಕ್ಷೆ ರಾಜೀವಿ ರೈ, ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ ಸದಸ್ಯೆ ಶ್ರೀಮತಿ ಭಾಗೀರಥಿ ಕಲ್ಮಡ್ಕ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಗೊಂಚಲು ಸಮಿತಿ ಸದಸ್ಯೆಯರು ಸಭೆಯಲ್ಲಿ ಉಪಸ್ಥಿತರಿದ್ದರು.