ಮಾ.9: ಪಂಜದಲ್ಲಿ ಸುಳ್ಯ ತಾಲೂಕು ಪ್ರಾ.ಕೃ. ಪ. ಸ. ಸಂಘಗಳ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿಗಳಿಗೆ ತರಬೇತಿ

0

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿ., ಮಂಗಳೂರು ಸಹಕಾರ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಇವರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನೂತನವಾಗಿ ಆಯ್ಕೆಯಾದ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಕ್ರಮ ಮಾ.9 ರಂದು ಪೂರ್ವಾಹ್ನ 10:00 ರಿಂದ
ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಲಿದೆ.


ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತಿ ಸಿ. ಉದ್ಘಾಟಿಸಿಲಿದ್ದಾರೆ. ದ. ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾ‌ರ್ ರೈ ಬಾಲ್ಯೋಟ್ಟು ಸಭಾಧ್ಯಕ್ಷತೆ ವಹಿಸಲಿದ್ದಾರೆ . ಮುಖ್ಯ ಅತಿಥಿಯಾಗಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್. ಎನ್. ಮನ್ಮಥ, ದ. ಕ. ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ವಿಷ್ಣು ಭಟ್ ,
ದ.ಕ. ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಹೆಚ್. ಎನ್. ರಮೇಶ್,
ಸುಳ್ಯ ತಾಲೂಕು ಸಹಕಾರಿ ಯೂನಿಯನ್
ಅಧ್ಯಕ್ಷ ರಮೇಶ್ ದೇಲಂಪಾಡಿ,ಪುತ್ತೂರು ಉಪವಿಭಾಗಸಹಕಾರ ಸಂಘಗಳ ಸಹಾಯಕ ನಿಬಂಧಕ ಎಸ್. ಎಮ್. ರಘು
ವೇದಿಕೆಯಲ್ಲಿ ಉಪಸ್ಥಿತರಿರುವರು. ಎಂದು ಸಂಘದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.