ಬೆಳ್ಳಾರೆ : ಮಹಿಳಾ ಸಬಲೀಕರಣದತ್ತ ನಮ್ಮ ಚಿತ್ತ ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ

0

ನಿರಂತರ ಕ್ರಿಯಾಶೀಲ ಚಟುವಟಿಕೆಗಳಿಂದ ನೆಮ್ಮದಿ ಜೀವನ – ರಾಜಣ್ಣ

ಸ್ವ ಉದ್ಯೋಗದಿಂದ ಸ್ವಾವಲಂಬಿ ಬದುಕು – ಜಯಶ್ರೀ ಕೊಯಿಂಗೋಡಿ

ಗ್ರಾಮ ಪಂಚಾಯತು ಬೆಳ್ಳಾರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಬೆಳ್ಳಾರೆ ವಲಯ ಧನಲಕ್ಷ್ಮೀ ಸ್ತ್ರೀಶಕ್ತಿ ಗೊಂಚಲು ಸಮಿತಿ ಬೆಳ್ಳಾರೆ, ಲಕ್ಷ್ಮೀ ಸಂಜೀವಿನಿ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟ(ರಿ.) ಬೆಳ್ಳಾರೆ ಸೆಸ್ಕೋ ಸೋಲಾರ್ ಲೈಟ್ಸ್ ಪ್ರೈ.ಲಿ. ಬೆಂಗಳೂರು ಮತ್ತು ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಇವುಗಳ ಸಂಯುಕ್ತ ಆಶ್ರಯದಲ್ಲಿ
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಸಬಲೀಕರಣದತ್ತ ನಮ್ಮ ಚಿತ್ತ ಮಾಹಿತಿ ಮತ್ತು ಸಂವಾದ ಕಾರ್ಯಕ್ರಮವು ಮಾ.೧೧ ರಂದು ಬೆಳ್ಳಾರೆ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಸುಳ್ಯ ತಾಲೂಕು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ನ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಕೊಯಿಂಗೋಡಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.


ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ನಮಿತಾ ಎಲ್.ರೈ ಅಧ್ಯಕ್ಷತೆ ವಹಿಸಿದ್ದರು.


ವೇದಿಕೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ವೀಣಾ ಮೂಡಾಯಿತೋಟ, ಶಿಶು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಶ್ರೀಮತಿ ಉಷಾ ಪ್ರಸಾದ್, ಸೆಲ್ಕೋ ಸೋಲಾರ್ ನ ಏರಿಯಾ ಮೆನೇಜರ್ ಪ್ರಸಾದ್ ಸೋಲಾರ್ ಶಕ್ತಿ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.

ಸರಕಾರದ ಸಬ್ಸಿಡಿ ಯೋಜನೆಗಳ ಬಗ್ಗೆ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಬೆಳ್ಳಾರೆ ಶಾಖೆಯ ಶಾಖಾ ವ್ಯವಸ್ಥಾಪಕ ನವೀನ್ ಮಾಹಿತಿ ನೀಡಿದರು.


ಸುಳ್ಯ ತಾಲೂಕು ಮಹಿಳಾ ವಿವಿದೊದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ಶ್ರೀಮತಿ ರಾಜೀವಿ ಆರ್ ರೈ, ಮೆಸ್ಕಾಂ ಇಂಜಿನಿಯರ್ ಪ್ರಸಾದ್ ಕತ್ಲಡ್ಕ, ಸಂಜೀವಿನಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಶ್ರೀಮತಿ ಶ್ವೇತಾ, ಧನಲಕ್ಷ್ಮೀ ಸ್ತ್ರೀ ಶಕ್ತಿ ಗೊಂಚಲು ಅಧ್ಯಕ್ಷೆ ಶ್ರೀಮತಿ ರೇಷ್ಮಾ ಡಿ,ಸ್ನೇಹ ಶ್ರೀ ಮಹಿಳಾ ಮಂಡಲದ ಅಧ್ಯಕ್ಷೆ ಪೂರ್ಣಿಮಾ ಪಡ್ಪು, ಲಕ್ಷ್ಮೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ನಳಿನಾಕ್ಷಿ ಉಪಸ್ಥಿತರಿದ್ದರು.


ಕೆಪಿಎಸ್ ನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಪಂಚಾಯತ್ ಪಿಡಿಒ ಪ್ರವೀಣ್ ಕುಮಾರ್ ಸ್ವಾಗತಿಸಿದರು. ಸಂಜಯ್ ನೆಟ್ಟಾರು ಕಾರ್ಯಕ್ರಮ ನಿರೂಪಿಸಿದರು.