ಪೆರಾಜೆ ಪ್ರಾ.ಕೃ.ಪ.ಸ.ಸಂಘದಲ್ಲಿ ಸುದೀರ್ಘ 35ವರ್ಷಗಳ ಸೇವೆ ಸಲ್ಲಿಸಿ ಸೇವಾ ನಿವೃತ್ತಿಯನ್ನು ಹೊಂದಿದ ಸಹಾಯಕ ಕಾರ್ಯನಿರ್ವಹಣಾಧಿಕಾರಿಯರಾದ ಶ್ರೀಮತಿ ಜಾನಕಿ ಎಸ್.ಎನ್. ಇವರಿಗೆ ಸಂಸ್ಥೆಯ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಮಾಡಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ನಿವೃತ್ತ ಕಾರ್ಯನಿರ್ವಹಣಾಧಿಕಾರಿಯವರ ಜಾನಕಿ ಎಸ್ .ಎನ್, ಸಂಸ್ಥೆಯ ಉಪಾಧ್ಯಕ್ಷರಾದ ಅಶೋಕ ಪೆರುಮುಂಡ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಕಲಾ ಬಾಲಚಂದ್ರ, ಉಪಾಧ್ಯಕ್ಷರಾದ ನಂಜಪ್ಪ ನಿಡ್ಯಮಲೆ, ಕೆಡಿಸಿಸಿ ಬ್ಯಾಂಕ್ ಮೇಲ್ವಿಚಾರಕರಾದ ವಿನೀತ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಲೋಕೇಶ್ ಇವರು ಉಪಸ್ಥಿತರಿದ್ದರು. ಸಭೆಯಲ್ಲಿ ಸಂಸ್ಥೆಯ ನಿರ್ದೇಶಕರುಗಳು ಹಾಗೂ ಸಿಬ್ಬಂದಿ ವರ್ಗದವರು, ಗ್ರಾಮ ಪಂಚಾಯತ್ ಸದಸ್ಯರುಗಳು, ಹಿರಿಯ ಸಹಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.
ಸಂಸ್ಥೆಯ ಅಧ್ಯಕ್ಷರು ನೆನಪಿನ ಕಾಣಿಕೆಯನ್ನು ಹಾಗೂ ಸನ್ಮಾನ ಪತ್ರವನ್ನು ನೀಡುವುದರ ಮುಖಾಂತರ ನಿವೃತ್ತ ಕಾರ್ಯನಿರ್ವಹಣಾಧಿಕಾರಿ ಜಾನಕಿಯ ಎಸ್ ಎನ್ ಇವರನ್ನು ಸನ್ಮಾನಿಸಿದರು. ಸಂಸ್ಥೆಯ ಸಿಬ್ಬಂದಿಯವರಾದ ಗೋಪಾಲಕೃಷ್ಣ ಎಂ ಆರ್ ಯುವರು ಸರ್ವರನ್ನು ವಂದಿಸಿದರು.