Home ಚಿತ್ರವರದಿ ಪರಿಶಿಷ್ಟ ವರ್ಗಗಳ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ಸಮಿತಿಯ ಸದಸ್ಯರಾಗಿ ಮಹೇಶ್ ಬೆಳ್ಳಾರ್ ಕರ್ ನೇಮಕ

ಪರಿಶಿಷ್ಟ ವರ್ಗಗಳ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ಸಮಿತಿಯ ಸದಸ್ಯರಾಗಿ ಮಹೇಶ್ ಬೆಳ್ಳಾರ್ ಕರ್ ನೇಮಕ

0

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ನೂತನವಾಗಿ ರಚಿಸಲ್ಪಟ್ಟ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಸದಸ್ಯರಾಗಿ ಮಹೇಶ್ ಬೆಳ್ಳಾರ್ಕರ್ ಇವರು ನಾಮನಿರ್ದೇಶನಗೊಂಡಿರುತ್ತಾರೆ.

ದ. ಕ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಜಿಲ್ಲಾ ಮಟ್ಟದ ಈ ಸಮಿತಿಯಲ್ಲಿ ಜಿಲ್ಲೆಯ ಒಟ್ಟು ಐವರು ಸದಸ್ಯರುಗಳಿದ್ದಾರೆ. ಈ ನಿಗಮದ ಮೂಲಕ ಕರ್ನಾಟಕ ಸರಕಾರವು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಕ್ಕೆ ಒಳಪಡುವ ಜಾತಿಗಳ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ಹಮ್ಮಿಕೊಂಡಿದೆ.

ಮಹೇಶ್ ಬೆಳ್ಳಾರ್ಕರ್ ರವರು ಸುಳ್ಯ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷರು ಹಾಗೂ ಮಾಜಿ ಶಾಸಕ ಕುಶಲರ ಪುತ್ರರಾಗಿದ್ದಾರೆ

NO COMMENTS

error: Content is protected !!
Breaking