ಅಜ್ಜಾವರ ಗ್ರಾಮದ ಮೇದಿನಡ್ಕ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾ.14ರಂದು ನಡೆಯಿತು.
ಈ ಸಂದರ್ಭದಲ್ಲಿ ಸುಳ್ಯ ಯೂನಿಯನ್ ಬ್ಯಾಂಕ್ ಶಾಖಾ ವ್ಯವಸ್ಥಾಪಕರಾದ ಅಜಯ್ ಕುಮಾರ್, ಕರ್ಲಪ್ಪಾಡಿ ಶ್ರೀ ಶಾಸ್ತವೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾಜೇಶ್ ಶೆಟ್ಟಿ ಮೇನಾಲ , ಅಜ್ಜಾವರ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಸಾದ್ ರೈ ಮೇನಾಲ, ಶ್ರೀಮತಿ ಸಾವಿತ್ರಿ ಜಯನ್ ಅಜ್ಜಾವರ, ಯತೀಶ್ ಪಡ್ಡಂ ಬೈಲು, ದೇವಸ್ಥಾನದ ಅಧ್ಯಕ್ಷರಾದ ನಾಚಿ ಮುತ್ತು, ಅರ್ಚಕರಾದ ಯೋಗರಾಜ್ ಮೇದಿನಡ್ಕ ಗೌರವ ಅಧ್ಯಕ್ಷರಾದ ದಯಾಳ್ ಮೇದಿನಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ದೇವಸ್ಥಾನದ ಇ… ಹುಂಡಿ ಉದ್ಘಾಟನೆಯನ್ನು ಯೂನಿಯನ್ ಬ್ಯಾಂಕ್ ಶಾಖಾ ವ್ಯವಸ್ಥಾಪಕರಾದ ಅಜಯ್ ಕುಮಾರ್ ನೆರವೇರಿಸಿದರು .
ದಯಾಳ್ ಮೇದಿನಡ್ಕ ಸ್ವಾಗತಿಸಿ, ರಮೇಶ್ ಮೇದಿನಡ್ಕ ಕಾರ್ಯಕ್ರಮ ನಿರೂಪಿಸಿದರು. ವಿನೋದ್ ಧನ್ಯವಾದ ಸಮರ್ಪಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿ ಪದಾಧಿಕಾರಿಗಳು , ಮಹಿಳಾ ಸಮಿತಿಯ ಪದಾಧಿಕಾರಿಗಳು ಊರ ಭಕ್ತಾದಿಗಳು ಉಪಸ್ಥಿತರಿದ್ದರು.