ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಚಂದನ ಸಾಹಿತ್ಯ ವೇದಿಕೆಯ 20ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ, ಸಾಹಿತಿ ಎಚ್ ಭೀಮರಾವ್ ವಾಷ್ಠರ್ ಅವರ ನೇತೃತ್ವದಲ್ಲಿ, ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಭ್ರಮ-2025 ಸಮಾರಂಭದಲ್ಲಿ ರಾಜ್ಯಮಟ್ಟದ ಚಂದನ ಚುಟುಕ ಕವಿಗೋಷ್ಠಿಯು ದಿನಾಂಕ 23 ಮಾರ್ಚ್ 2025 ರಂದು ಭಾನುವಾರ ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಲಿದೆ. ಚಂದನ ಚುಟುಕು ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬ ಕವಿಗಳಿಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
ಸಂಗೀತ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಕಲಾವಿದರಿಗೂ ಕೂಡ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು. ಮಾರ್ಚ್ 20 ತಾರೀಖಿನ ಒಳಗೆ ಚುಟುಕು ಕವಿಗೋಷ್ಠಿಗಾಗಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನೀಡುವುದಕ್ಕಾಗಿ ಆಸಕ್ತರು ತಮ್ಮ ಹೆಸರನ್ನು ಫೋನ್ ಮೂಲಕ 984539239 ನೋಂದಾಯಿಸಿಕೊಳ್ಳಿ. ಒಬ್ಬರಿಗೆ 3 ಚುಟುಕು ವಾಚಿಸಲು ಅವಕಾಶ ಇರುತ್ತದೆ ಎಂದು ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಎಚ್ ಭೀಮರಾವ್ ವಾಷ್ಠರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.