Home Uncategorized ಸುಳ್ಯ ನ್ಯಾಯಾಲಯದಲ್ಲಿ ರಾಷ್ಟೀಯ ಮಹಿಳಾ ದಿನಾಚರಣೆ ಆಚರಣೆ

ಸುಳ್ಯ ನ್ಯಾಯಾಲಯದಲ್ಲಿ ರಾಷ್ಟೀಯ ಮಹಿಳಾ ದಿನಾಚರಣೆ ಆಚರಣೆ

0

ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ ಮತ್ತು ವಕೀಲರ ಸಂಘ ಸುಳ್ಯ ಇದರ ಸಂಯುಕ್ತಾಶ್ರಯ ದಲ್ಲಿ ಅಂತ ರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಣೆ ಮಾ 15 ರಂದು ಸುಳ್ಯ ವಕೀಲರ ಸಂಘದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನ್ಯಾಯಾಲಯದ ಸಿಬ್ಬಂದಿಗಳಿಗೆ ಹಾಗೂ ವಕೀಲರುಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ತಾಲೂಕು ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಹಾಗೂ ಸಿವಿಲ್ ನ್ಯಾಯಾಧೀಶರಾದ ಅರ್ಪಿತಾ ರವರು ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ವಕೀಲ ಸಂಘದ ಅಧ್ಯಕ್ಷರಾದ ಸುಕುಮಾರ್ ಕೋಡ್ತುಗುಳಿ ರವರು ವಹಿಸಿದ್ದರು. ವೇದಿಕೆಯಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕರಾದ ರಮೇಶ್. ಆರ್ ರವರು ಉಪಸ್ಥಿತರಿದ್ದರು.

ಸ್ಪರ್ಧೆಯಲ್ಲಿ ಭಾಗವಹಿಸಿದ ವಿಜೇತ ಸ್ಪರ್ದಿಗಳಿಗೆ ಬಹುಮಾನ ವಿತರಣೆ ನಡೆಯಿತು.ಹಿರಿಯ ಮಹಿಳಾ ವಕೀಲರಾದ ಶ್ರೀಮತಿ. ಚಂಪಾ ವಿ ಜಿ ರವರು ಕಾರ್ಯಕ್ರಮವನ್ನು ನಿರೂಪಿಸಿದರು.ವಕೀಲರ ಸಂಘದ ಉಪಾಧ್ಯಕ್ಷ ರಾದ ದಿಲೀಪ್ ಬಾಬ್ಲುಬೆಟ್ಟು ವಂದಿಸಿದರು.

NO COMMENTS

error: Content is protected !!
Breaking