
ಸುಳ್ಯದ ಬೂಡು ಪರಿಸರದಲ್ಲಿರುವ ಶ್ರೀ ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ಮಾ.16ರಂದು ನಡೆಯಿತು.
ಮಾ.16ರಂದು ಬೆಳಗ್ಗೆ ಯಿಂದ ವೈದಿಕ ಕಾರ್ಯಕ್ರಮಗಳು ನಡೆಯುವುದು. ಬೆಳಗ್ಗೆ ವೃಷಭ ಲಗ್ನದಲ್ಲಿ ಪ್ರತಿಷ್ಟೆ, ಕಲಶಾಭಿಷೇಕ ನಡೆಯಿತು.
ಸಂಜೆ ಧಾರ್ಮಿಕ ಸಭೆ ನಡೆಯಲಿದ್ದು ಮಾಜಿ ಸಂಸದ ನಳಿನ್‌ಕುಮಾರ್ ಕಟೀಲ್ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಆರ್ಯನ್ ಮ್ಯೂಸಿಕಲ್ಸ್ ಸುಳ್ಯ ಇವರಿಂದ ಸಂಗೀತ ರಸಮಂಜರಿ. ಬಳಿಕ ಎಕ್ಸ್ ಟೆಸಿ ಡ್ಯಾನ್ಸ್ ಕ್ರಿವ್ ಸುಳ್ಯ ಇವರಿಂದ ಡಾನ್ಸ್ ಧಮಾಕ ನಡೆಯುವುದು. ಹಾಗೂ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ವೈಭವ ನಡೆಯುವುದು.
ಮಾ.18ರಂದು ಮಂಗಳವಾರ ದೈವಗಳ ನೇಮೋತ್ಸವ ನಡೆಯುವುದು.