
ದ.ಕ ಸಂಪಾಜೆ ಗ್ರಾಮದ ಕೈಪಡ್ಕ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ
ಸಂಭವಿಸಿದೆ.
ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಸಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ತಲೆ ಕೆಳಗಾಗಿ ಕಾರು ಪಲ್ಟಿಯಾಗಿದೆ. ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದು, ತಲೆಗೆ ಗಾಯವಾಗಿದೆ.
ಸ್ಥಳೀಯರ ಸಹಾಯದಿಂದ ಅಂಬುಲೆನ್ಸ್ ಮೂಲಕ ಸುಳ್ಯ ಆಸ್ಪತ್ರೆ ಕರೆದು ಕೊಂಡು ಹೋಗಲಾಗಿದೆ.