
ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿಯ ವಾರ್ಷಿಕ ಕ್ರೀಡಾಕೂಟ ಮಾ -15 ರಂದು ಕಾಲೇಜಿನ ಮೈದಾನದಲ್ಲಿ ನಡೆಯಿತು. ಈ ಕ್ರೀಡಾಕೂಟವನ್ನು ಮಾಜಿ ವೈಟ್ ಲಿಪ್ಟರ್ ಚಾಂಪಿಯನ್ ಶ್ರೀ ಎ ರಮೇಶ್ ಇವರು ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ವಹಿಸಿದ್ದರು.

ವೇದಿಕೆಯಲ್ಲಿ ಐ ಕ್ಯೂ ಎ ಸಿ ಸಂಚಾಲಕರಾದ ಡಾ ಪ್ರೀತಿ ರಾವ್ ಕೆ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಉದಯ ಶಂಕರ ಹೆಚ್ ಹಾಗೂ ಕ್ರೀಡಾ ನಾಯಕರುಗಳಾದ ಸ್ಫೂರ್ತಿ ರೈ ಬಿ ಹಾಗೂ ಹೇಮಂತ್ ಮೊದಲಾದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಪ್ರಾರ್ಥನೆ ಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಕನ್ನಡ ಉಪನ್ಯಾಸಕರಾದ ಕಿಶೋರ್ ಕುಮಾರ್ ಸ್ವಾಗತಿಸಿ, ಉಪನ್ಯಾಸಕಿ ಶ್ವೇತಾ ವಂದಿಸಿದರು ಉಪನ್ಯಾಸಕ ಮಂಜು ಪಿ ಅತಿಥಿಗಳನ್ನು ಪರಿಚಯಿಸಿದರು. ಹಿಂದಿ ಉಪನ್ಯಾಸಕ ರಾಮಕೃಷ್ಣ ಕೆ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮ ದ ಬಳಿಕ ವಿದ್ಯಾರ್ಥಿಗಳಿಗೆ ವಿವಿಧ ವಿಭಾಗದ ಅತ್ಲೇಟಿಕ್ಸ್ ಸ್ಪರ್ಧೆಗಳು ನಡೆದವು.
