ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವ ರಾತ್ರಿ ಕಂಡನಾರ್ ಕೇಳನ್ ದೈವದ ವೆಳ್ಳಾಟಂ ಜರುಗಿತು. ಸಂಜೆ ಕಾರ್ನವನ್ ದೈವದ ವೆಳ್ಳಾಟಂ ನಡೆದು ಬಳಿಕ
ಶ್ರೀ ಕೋರಚ್ಚನ್ ದೈವದ ವೆಳ್ಳಾಟಂ ನಡೆದ ನಂತರ ಶ್ರೀ ಕಂಡನಾರ್ ಕೇಳನ್ ದೈವದ ವೆಳ್ಳಾಟಂ ನಡೆದು ಬಪ್ಪಿಡಲ್ ನಡೆಯಿತು.

ಈ ಸಂದರ್ಭದಲ್ಲಿ ಆಕರ್ಷಕ ಸಿಡಿ ಮದ್ದಿನ ಪ್ರದರ್ಶನವಾಯಿತು.
ಈ ಸಂದರ್ಭದಲ್ಲಿ ಊರಿನ ಹಾಗೂ ಪರ ಊರಿನ ಭಕ್ತಾದಿಗಳು ಸಹಸ್ರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು. ಆಗಮಿಸಿದ ಎಲ್ಲರಿಗೂ ರಾತ್ರಿ ಸಮಯದಲ್ಲಿ ನಿರಂತರವಾಗಿ
ಅನ್ನ ಪ್ರಸಾದ ವಿತರಣೆಯಾಯಿತು. ತರವಾಡು ಮನೆಯ ಮುಖ್ಯಸ್ಥರು ಭಾಗವಹಿಸಿದರು. ಗ್ರಾಮದ ಹಲವಾರು ಸಂಘ ಸಂಸ್ಥೆಗಳ ಸದಸ್ಯರು ಸ್ವಯಂ ಸೇವಕ ರಾಗಿ ಸಹಕರಿಸಿದರು.