ದುಗ್ಗಲಡ್ಕ ಶ್ರೀ ದುಗ್ಗಲಾಯ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ನೇಮೋತ್ಸವ

0

ದೈವಗಳಿಗೆ ತಂಬಿಲ ಮತ್ತು ಶ್ರೀ ಸತ್ಯನಾರಾಯಣ ದೇವರ ಪೂಜೆ

ದುಗ್ಗಲಡ್ಕದ ಶ್ರೀ ದುಗ್ಗಲಾಯ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ನೇಮೋತ್ಸವದ ಅಂಗವಾಗಿ ಬೆಳಿಗ್ಗೆ ಗಣಹೋಮ, ನಾಗದೇವರು ಮತ್ತು ದೈವಗಳಿಗೆ ತಂಬಿಲ ನಡೆದು ಮಧ್ಯಾಹ್ನ ಶ್ರೀ ಸತ್ಯನಾರಾಯಣ ದೇವರ ಪೂಜೆ ನಡೆಯಿತು.ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.


ಸಂಜೆ ಭಂಡಾರ ಆಗಮಿಸಲಿದ್ದು,ರಾತ್ರಿ ರುಧಿರ ಚಾಮುಂಡಿ ದೈವದ ನೇಮ, ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ.ನಾಳೆ ದುಗ್ಗಲಾಯ ದೈವದ ನೇಮೋತ್ಸವ ನಡೆಯಲಿದೆ.