ಆಯುಷ್ಮಾನ್ ಆರೋಗ್ಯ ಮಂದಿರ ಕಲ್ಮಡ್ಕದ ವತಿಯಿಂದ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ಕಲ್ಮಡ್ಕ ಪ್ರಾ.ಕೃ.ಪ.ಸ.ಸಂಘದ ಆವರಣದಲ್ಲಿ ಮಾ. 19ರಂದು ನಡೆಯಿತು.
ಸುದ್ದಿಯ ನಮ್ಮ ಗ್ರಾಮ ನಮ್ಮ ಹೆಮ್ಮೆ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಸಂದರ್ಭದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆದಿದ್ದು, ಸಮುದಾಯದ ಆರೋಗ್ಯಾಧಿಕಾರಿ ಶ್ರೀಮತಿ ಸೌಮ್ಯ ಸ್ವಸ್ತಿಕ್ ಬಿಪಿ ಮತ್ತು ಶುಗರ್ ಪರೀಕ್ಷೆ ನಡೆಸಿದರು. ಆಶಾ ಕಾರ್ಯಕರ್ತೆಯರಾದ ಯಮುನಾ ಮತ್ತು ವಾರಿಜ ಸಹಕರಿಸಿದರು.