ದುಗ್ಗಲಡ್ಕ ಶ್ರೀ ದುಗ್ಗಲಾಯ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ನೇಮೋತ್ಸವ

0

ದುಗ್ಗಲಡ್ಕ ಶ್ರೀ ದುಗ್ಗಲಾಯ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ನೇಮೋತ್ಸವದ ಪ್ರಯುಕ್ತ ಮಾ.19ರಂದು ರಾತ್ರಿ ಶ್ರೀ ರುಧಿರ ಚಾಮುಂಡಿ ದೈವದ ನೇಮೋತ್ಸವ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.
ಸಂಜೆ ನಡುಬೆಟ್ಟು ಚಾವಡಿಯಿಂದ ಶ್ರೀ ದೈವಗಳ ಭಂಡಾರ ಆಗಮಿಸಿ ರುಧಿರ ಚಾಮುಂಡಿ ದೈವದ ನೇಮೋತ್ಸವ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಿತು.


ಸುಳ್ಯ ನಗರ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ ಎ.ನೀರಬಿದಿರೆ ಅಧ್ಯಕ್ಷೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.
ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯ ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.

ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿ ಕು.ಶ್ರೀದೇವಿ ಧಾರ್ಮಿಕ ಉಪನ್ಯಾಸಕರಾಗಿ ಆಗಮಿಸಿ ಮಾತನಾಡಿ ಮನೆಗಳಲ್ಲಿ ಆಚಾರ ವಿಚಾರ, ಧಾರ್ಮಿಕ ಸಂಸ್ಕೃತಿ ಕಡಿಮೆಯಾಗುತ್ತಿದೆ. ದೇವಸ್ಥಾನ, ಭಜನಾ ಮಂದಿರಗಳಲ್ಲಿ ಧಾರ್ಮಿಕ ಶಿಕ್ಷಣದ ತರಗತಿಗಳನ್ನು ಕೊಡುವ ಕೆಲಸ ಆಗಬೇಕು. ಮಕ್ಕಳಿಗೆ ಪುರಾಣ,ದೈವ ದೇವರ ಕಥೆಗಳನ್ನು, ನಮ್ಮ ಸಂಸ್ಕೃತಿಯನ್ನು ತಿಳಿಸುವ ಕೆಲಸವನ್ನು ಹಿರಿಯರು ಮಾಡಬೇಕು ಎಂದ ಅವರು ಪರಾಂಪರಗತವಾಗಿ ಬಂದಿರುವ ಧಾರ್ಮಿಕ ಆಚರಣೆಗಳಿಗೆ ಆಡಚಣೆ ಮಾಡುವುದು ಸರಿಯಲ್ಲ.ಜಾತಿಯನ್ನು ಮೀರಿ ನಾವೆಲ್ಲರೂ ಒಗ್ಗಟ್ಟಾಗಿ ಸಮೃದ್ಧ ಹಿಂದೂ ಸಮಾಜ ಕಟ್ಟಬೇಕು ಎಂದು ಅವರು ಹೇಳಿದರು.


ಮಾಜಿ ಸಚಿವರಾದ ಎಸ್.ಅಂಗಾರ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಸುಳ್ಯ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಕುಸುಮಾಧರ ಎ.ಟಿ. ಮಾತನಾಡಿದರು. ದೈವಸ್ಥಾನದ ಆಡಳಿತ ಮೊಕ್ತೇಸರರಾದ ರಾಘವೇಂದ್ರ ಭಟ್ ಕಲ್ದಂಬೆ, ಅಧ್ಯಕ್ಷ ಕುಶಾಲಪ್ಪ ಗೌಡ ಕಜೆ, ಗೌರವಾಧ್ಯಕ್ಷ ಸುಂದರ ರಾವ್ ಕೊಡೆಂಚಡ್ಕ,ನಗರ ಪಂಚಾಯತ್ ಸದಸ್ಯ ಬಾಲಕೃಷ್ಣ ರೈ ದುಗ್ಗಲಡ್ಕ, ಅಯ್ಯಪ್ಪ ಭಜನಾ ಮಂದಿರದ ಅಧ್ಯಕ್ಷ ದಯಾನಂದ ಸಾಲಿಯಾನ್ ಮೂಡೆಕಲ್ಲು,ಕಾರ್ಯದರ್ಶಿ ಶೇಖರ ಗೌಡ ಕುದ್ಪಾಜೆ, ಮಹಿಳಾ ಸೇವಾ ಸಮಿತಿ ಅಧ್ಯಕ್ಷೆ ಶ್ರೀಮತಿ ಪ್ರಭಾವತಿ ರೈ, ಯುವ ಸೇವಾ ಸಮಿತಿ ಅಧ್ಯಕ್ಷ ನಾರಾಯಣ ನಾಯ್ಕ, ದುಗ್ಗಲಡ್ಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಶಿವಪ್ರಸಾದ್ ಕುದ್ಪಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಮತ್ತು ನ.ಪಂ.ಅಧ್ಯಕ್ಷೆ ಶಶಿಕಲಾ ನೀರಬಿದಿರೆಯವರನ್ನು ಸನ್ಮಾನಿಸಲಾಯಿತು.
ದುಗ್ಗಲಾಯ ಮಹಿಳಾ ಸಮಿತಿಯವರು ದೈವಸ್ಥಾನಕ್ಕೆ ನೀಡಿದ ಕೊಡುಗೆಗಳನ್ನು ಶಾಸಕಿ ಭಾಗೀರಥಿ ಮುರುಳ್ಯ ಅನಾವರಣ ಮಾಡಿದರು.
ಕಾರ್ಯಕ್ರಮದಲ್ಲಿ ಕು.ಹರ್ಷಿತಾ ಪ್ರಾರ್ಥಿಸಿದರು. ದೈವಸ್ಥಾನ ಸಮಿತಿ ಸದಸ್ಯ ಯತೀಶ್ ರೈ ಸ್ವಾಗತಿಸಿ, ಕಾರ್ಯದರ್ಶಿ ಶೇಖರ ಕುದ್ಪಾಜೆ ವಂದಿಸಿದರು. ಗಿರೀಶ್ ಕುಂಟಿನಿ ಕಾರ್ಯಕ್ರಮ ನಿರೂಪಿಸಿದರು.