ದುಗ್ಗಲಡ್ಕದ ಶ್ರೀ ದುಗ್ಗಲಾಯ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ನೇಮೋತ್ಸವದ ಪ್ರಯುಕ್ತ ಇಂದು ಶ್ರೀ ದುಗ್ಗಲಾಯ ದೈವದ ನೇಮೋತ್ಸವ ಭಕ್ತಿ ಸಂಭ್ರಮದಿಂದ ನಡೆಯಿತು.
ಸಾವಿರಾರು ಮಂದಿ ಆಗಮಿಸಿ ಪ್ರಸಾದ ಸ್ವೀಕರಿಸಿದರು ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ದೈವಸ್ಥಾನಕ್ಕೆ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ಆಗಮಿಸಿ ಪ್ರಸಾದ ಸ್ವೀಕರಿಸಿದರು. ದೈವಸ್ಥಾನದ ವತಿಯಿಂದ ಅವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮೊಕ್ತೇಸರರಾದ ರಾಘವೇಂದ್ರ ಭಟ್ ಕಲ್ದಂಬೆ, ಗೌರವಾಧ್ಯಕ್ಷ ಸುಂದರ ರಾವ್ ,ಅಧ್ಯಕ್ಷ ಕುಶಾಲಪ್ಪ ಗೌಡ ಕಜೆ, ಕಾರ್ಯದರ್ಶಿ ಶೇಖರ್ ಕುದ್ಪಾಜೆ, ಮಾಜಿ ಅಧ್ಯಕ್ಷ ದಯಾನಂದ ಸಾಲಿಯಾನ್ ಮೂಡೆಕಲ್ಲು,ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಎ.ನೀರಬಿದಿರೆ, ಸದಸ್ಯರಾದ ಬಾಲಕೃಷ್ಣ ರೈ ದುಗ್ಗಲಡ್ಕ, ಮಹಿಳಾ ಸೇವಾ ಸಮಿತಿ ಅಧ್ಯಕ್ಷೆ ಪ್ರಭಾವತಿ ರೈ, ಯುವ ಸೇವಾ ಸಮಿತಿ ಅಧ್ಯಕ್ಷ ನಾರಾಯಣ ನಾಯ್ಕ, ಸಮಿತಿಗಳ ಸದಸ್ಯರು, ಊರ- ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.
